Chowdeshwari

Chowdeshwari
Chowdeshwarid

ಮಡಿಕೇರಿ ನಗರದ ಮಾರುಕಟ್ಟೆಯ ಸಮೀಪವಿರುವ ದೇಗುಲ ಇದಾಗಿದ್ದು, ಪ್ರಸ್ತುತ ದೇವಾಂಗ ಜನಾಂಗದವರ ಸ್ವಾಧೀನದಲ್ಲಿದೆ. ಈ ದೇಗುಲವನ್ನು ಕೊಡಗಿನ ರಾಜನಾಗಿದ್ದ ಲಿಂಗರಾಜನು ನಿರ್ಮಿಸಿರುವನೆಂದು ನಂಬಲಾಗಿದೆ. ಗರ್ಭಗುಡಿಯಲ್ಲಿದ್ದ ಅಮ್ಮನವರ ಮೂಲ ವಿಗ್ರಹವನ್ನು 1966ರಲ್ಲಿ ಬದಲಾಯಿಸಲಾಯಿತ್ತಾದರೂ, ಮೂಲ ವಿಗ್ರಹ ಇಂದಿಗೂ ಭದ್ರವಾಗಿದ್ದು ವಾರ್ಷಿಕ ಉತ್ಸವದಂದು (ದುರ್ಗಾ ಜಯಂತಿ) ಅದೇ ವಿಗ್ರಹವನ್ನು ಪಲ್ಲಕಿಯಲ್ಲಿಟ್ಟು ಮೆರವಣಿಗೆ ಮಾಡಲಾಗುತ್ತದೆ. 1966 ರಲ್ಲಿ ಚೌಡೇಶ್ವರಿ ಮಾತೆಯ ವಿಗ್ರಹವಲ್ಲದೆ ಗರ್ಭಗುಡಿಗೆ ಹೊಂದಿಕೊಂಡಂತೆ ಎಡ-ಬಲಗಳಲ್ಲಿ ರಾಮ ಮತ್ತು ಸತ್ಯನಾರಾಯಣ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು. ಅಲ್ಲದೆ ಮಡಿಕೇರಿಯಲ್ಲಿ ಪ್ರಥಮವೆಂಬಂತೆ `ನವಗ್ರಹ'ವನ್ನು ಪ್ರತಿಷ್ಠಾಪಿಸಲಾಯಿತು. ಇಲ್ಲಿ ಪ್ರತಿವರ್ಷ ದುರ್ಗಾಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವುದರ ಜೊತೆಗೆ ನವರಾತ್ರಿ, ದೀಪಾವಳಿ, ಶಿವರಾತ್ರಿ, ಶ್ರೀ ಕೃಷ್ಣ ಜನ್ಮಾಷ್ಠಮಿ, ಗೌರಿಗಣೇಶ, ಹಬ್ಬಗಳನ್ನು ಆಚರಿಸುವುದರ ಜೊತೆಗೆ ಕಾರ್ತಿಕ ಮಾಸದ ನಿತ್ಯ ಪೂಜೆಗಳು, ಭಕ್ತಾಧಿಗಳೇ ಸೇರಿ ನಡೆಸುವ ರಂಗಪೂಜೆ ವಿಶೇಷವಾಗಿರುತ್ತದೆ.
ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

Comments are closed.