ಮಡಿಕೇರಿ ತಾಲ್ಲೂಕು ಎಪಿಎಂಸಿ ಚುನಾವಣೆ ಅಧ್ಯಕ್ಷರಾಗಿ ಬೆಪ್ಪುರನ ಮೇದಪ್ಪ ಮತ್ತು ಉಪಾಧ್ಯಕ್ಷರಾಗಿ ವಾಂಚೀರ ಜಯನಂಜಪ್ಪ ಅವಿರೋಧ ಆಯ್ಕೆ

ಮಡಿಕೇರಿ ತಾಲ್ಲೂಕು ಎಪಿಎಂಸಿ ಚುನಾವಣೆ ಅಧ್ಯಕ್ಷರಾಗಿ ಬೆಪ್ಪುರನ ಮೇದಪ್ಪ ಮತ್ತು ಉಪಾಧ್ಯಕ್ಷರಾಗಿ ವಾಂಚೀರ ಜಯನಂಜಪ್ಪ ಅವಿರೋಧ ಆಯ್ಕೆ

ಮಡಿಕೇರಿ ಜೂ.06: ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ಹೆರವನಾಡು ಗ್ರಾಮದ ಬೆಪ್ಪುರನ ಮೇದಪ್ಪ ಅಧ್ಯಕ್ಷರಾಗಿ ಹಾಗೂ ಹೊದ್ದೂರು ಗ್ರಾಮದ ವಾಂಚೀರ ಜಯ ನಂಜಪ್ಪ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ಮಡಿಕೇರಿ ತಹಶೀಲ್ದಾರ್ ಮಹೇಶ್ ಅವರು ಘೋಷಿಸಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಚೇರಿಯಲ್ಲಿ ನಡೆದ ಮೂರನೇ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯ ಅವಿರೋಧ ಆಯ್ಕೆ ಸಂಬಂಧಿಸಿದಂತೆ ತಹಶೀಲ್ದಾರರು ಪ್ರಕಟಿಸಿದರು.

ಮಡಿಕೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹೆರವನಾಡು ಗ್ರಾಮದ ಬೆಪ್ಪುರನ ಮೇದಪ್ಪ ಅವರು ನಾಮಪತ್ರ ಸಲ್ಲಿಸಿ ಮುಂದಿನ 20 ತಿಂಗಳ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಜೊತೆಗೆ ಉಪಾಧ್ಯಕ್ಷರಾಗಿ ಹೊದ್ದೂರು ಗ್ರಾಮದ ವಾಂಚೀರ ಜಯ ನಂಜಪ್ಪ ಅವರು ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಅಧ್ಯಕ್ಷರಾದ ಬೆಪ್ಪುರನ ಮೇದಪ್ಪ ಅವರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಕಾರ್ಯಕ್ರಮ ರೂಪಿಸಲಾಗುವುದು. ಜೊತೆಗೆ ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ವ್ಯವಸ್ಥಿತ ಮಾರುಕಟ್ಟೆ ನಿರ್ಮಿಸಲಾಗುವುದು. ಆ ನಿಟ್ಟಿನಲ್ಲಿ ಆಡಳಿತ ಮಂಡಳಿ ಮತ್ತು ಸರ್ವ ಸದಸ್ಯರೊಂದಿಗೆ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಲಾಗುವುದು ಎಂದು ಅವರು ತಿಳಿಸಿದರು.

ಉಪಾಧ್ಯಕ್ಷರಾದ ವಾಂಚೀರ ಜಯ ನಂಜಪ್ಪ ಅವರು ಮಾತನಾಡಿ, ಮುಂಬರುವ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ, ರೈತರಿಗೆ ಅನುಕೂಲವಾಗುವಂತೆ ಕಾಯನಿರ್ವಹಿಸುವುದಾಗಿ ಅವರು ತಿಳಿಸಿದರು. ಜೊತೆಗೆ ರೈತರಿಗೆ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ವಿನೂತ ರೀತಿಯಲ್ಲಿ ಅನುಕೂಲ ಮಾಡಿಕೊಡುವುದಾಗಿ ವಾಂಚೀರ ಜಯ ನಂಜಪ್ಪ ಅವರು ತಿಳಿಸಿದರು.

ಮಡಿಕೇರಿ ತಾ.ಪಂ ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಜಿ.ಪಂ.ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಗಿರೀಶ್ ಪೂಣಚ್ಚ, ಮೊಂಡಂಡ ಕುಟ್ಟಪ್ಪ, ಹೇಮಾ, ನಿರ್ಮಲಾ, ತಮ್ಮಯ್ಯ, ಚಂಡೀರ ಜಗದೀಶ್, ಎನ್.ಎ ಕಾವೇರಪ್ಪ, ಚೆರಿಯಮನೆ ರೋಹಿಣಿ, ದೇವಪ್ಪ, ಅನಂತೇಶ್ವರ, ಅಂಬಿ ಕಾರ್ಯಪ್ಪ ಇತರರು ಇದ್ದರು.

Leave a Reply

Your email address will not be published. Required fields are marked *