ಬಸವ ಜಯಂತಿ ಆಚರಣೆ

ಮಡಿಕೇರಿ ಏ.23: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ‘ಬಸವ ಜಯಂತಿ’ಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ದೀಪ ಬೆಳಗಿ, ಪುಷ್ಪನಮನ ಸಲ್ಲಿಸಿ, ಗೌರವ ಸಲ್ಲಿಸಿದರು. ಬಸವೇಶ್ವರರು ಎಲ್ಲಾ ಸಮಾಜದವರನ್ನೂ ಅನುಭವ ಮಂಟಪದ ಪ್ರಜಾಪ್ರಭುತ್ವದ ವೇದಿಕೆಗೆ ತಂದು ಅಭಿವ್ಯಕ್ತಿ ಸ್ವಾತಂತ್ರ್ಯದ ಚರ್ಚಾ ವೇದಿಕೆಯಾಗಿ ಬೆಳೆಸಿದರು ಎಂದು ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ ಅವರು ತಿಳಿಸಿದರು. ಇಡೀ ಶರಣ ಚಳುವಳಿಯ ಮಹಾಚೇತನರಾಗಿ ಬಸವೇಶ್ವರರು ೧೨ ನೇ ಶತಮಾನದಲ್ಲಿ ಬೆಳಕು ಕಂಡಿದರು ಎಂದು ಬಸಪ್ಪ ಅವರು ನುಡಿದರು. ಬಸವಣ್ಣ ಎಂಬ ವ್ಯಕ್ತಿತ್ವದ ಮತ್ತು ಶರಣ ಚಳುವಳಿಯ ಮಹಾನಡೆಯ ಸಂಗಮತ್ವವನ್ನು ಸದಾ ಸ್ಮರಿಸಬೇಕಿದೆ. ಬಸವಣ್ಣ ಅವರು ಮಹಾ‌ ಮಾನವತಾವಾದಿಯಾಗಿ ಕಟ್ಟಿ ಬೆಳೆಸಿದ ಚಳವಳಿ ಕನ್ನಡ ನೆಲದಲ್ಲಿ ಹುಟ್ಟಿ ಬೆಳೆದ ಶರಣ ಚಳವಳಿ ಆಗಿದೆ ಎಂದರು. ಕಾಯಕ, ದಾಸೋಹ ಮೂಲಕ ಸಮಾಜದಲ್ಲಿ ಸಮಾನತೆ ತರಲು ಬಸವೇಶ್ವರರು ಶ್ರಮಿಸಿದ್ದಾರೆ ಎಂದು ಬಸಪ್ಪ ಅವರು ನುಡಿದರು. ಬಸವಣ್ಣನವರು ಸಾಮಾನ್ಯರು ಮಾತನಾಡುವ ಕನ್ನಡ ಭಾಷೆಯಲ್ಲಿ ವಚನಗಳನ್ನು ರಚಿಸಿದರು. ಈ ಮೂಲಕ ಜನಸಾಮಾನ್ಯರಿಗೂ ಅವರ ಸಂದೇಶಗಳು ಸುಲಭವಾಗಿ ತಲುಪಿತು ಎಂದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಂಗರಾವ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ , ಇತರರು ಇದ್ದರು.

ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments