ಮಡಿಕೇರಿ ಏ.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ‘ಶ್ರೀ ಶಂಕರಾಚಾರ್ಯರ’ ಜಯಂತಿಯನ್ನು ಮಂಗಳವಾರ ಸರಳವಾಗಿ ಆಚರಿಸಲಾಯಿತು.
ನಗರದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಸುರೇಶ್ ಕುಮಾರ್, ಕೃಷಿ ಇಲಾಖೆಯ ಉಪ ನಿರ್ದೇಶಕರಾದ ಡಾ.ಬಾಲರಾಜ್ ರಂಗರಾವ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು.
ಶ್ರೀ ಶಂಕರಾಚಾರ್ಯರು ವಿದ್ಯೆಗೆ ಹೆಚ್ಚಿನ ಒತ್ತು ನೀಡಿದ್ದರು, ವಿದ್ಯೆಯು ಆತ್ಮಜ್ಞಾನ ನಮ್ಮ ತನದ ಅರಿವೇ ವಿದ್ಯೆ ಆಗಿದೆ ಎಂಬುದನ್ನು ತಿಳಿಸಿದ್ದಾರೆ ಎಂದು ಗಣ್ಯರು ಪ್ರತಿಪಾದಿಸಿದರು.
ಭಾರತೀಯ ಪ್ರಜ್ಞಾ ಪರಂಪರೆಯಲ್ಲಿ ಶಿಖರಪ್ರಾಯವಾಗಿ ಕಾಣಿಸಿಕೊಂಡವರು ಆಚಾರ್ಯ ಶಂಕರರು ಭಾರತೀಯ ಚಿಂತನೆಯ ಮೂಲವೆನಿಸಿರುವ ವೇದಗಳ ಸಾರ ಬಗ್ಗೆ ಪ್ರತಿಪಾದಿಸಿದ್ದಾರೆ. ಜ್ಞಾನವೇ ಆತ್ಮಜ್ಞಾನ, ಬ್ರಹ್ಮಜ್ಞಾನ ಎಂಬುದನ್ನು ಆಚಾರ್ಯರ ಕಾಣಿಕೆಯ ಸಾರವಾಗಿದೆ ಎಂದು ಗಣ್ಯರು ಹೇಳಿದರು.