ಕುಶಾಲನಗರ ಪಟ್ಟಣ್ಣದಲ್ಲಿ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಬಿರುಸಿನ ಪ್ರಚಾರ

ಕುಶಾಲನಗರ: ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಾಪಂಡ ಮುತ್ತಪ್ಪ ಸಂತೆ ದಿನವಾದ ಮಂಗಳವಾರ ಕುಶಾಲನಗರದಲ್ಲಿ ತಮ್ಮ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ನಡೆಸಿ ಮತಯಾಚನೆ ಮಾಡಿದರು.

ಪ್ರಚಾರ ವೇಳೆ ಮಾತನಾಡಿದ ನಾಪಂಡ ಮುತ್ತಪ್ಪ, ರಾಜ್ಯದಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾತ್ಯಾತೀತ ಜನತಾದಳ ಸರ್ಕಾರವು ಅಸ್ಥಿತ್ವಕ್ಕೆ ಬರಲಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಕೊಡಗಿನಲ್ಲಿ ಕಳೆದ ಎರಡು ದಶಕಗಳಿಂದ ಬಿಜೆಪಿಯೇ ಅಧಿಕಾರದಲ್ಲಿದ್ದು, ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ. ಅಲ್ಲದೇ ಮತದಾರರು ಕೂಡ ಈ ಬಾರಿ ಬದಲಾವಣೆ ಬಯಸಿದ್ದು, ಸ್ಥಳೀಯ ಜನಪ್ರತಿನಿಧಿಯನ್ನು ಆಯ್ಕೆ ಮಾಡಬೇಕೆಂಬ ಇಚ್ಛೆ ಹೊಂದಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ರೈತರ ಸಾಲ ಮನ್ನಾ ಮಾಡುವ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿ ಹೊಸ ದಾಖಲೆ ಮಾಡಿದ್ದರು. ಅದೇ ರೀತಿ ಈ ಬಾರಿ ಕೂಡ ಜನಪರ ಯೋಜನೆಗಳನ್ನು ರೂಪಿಸಿರುವ ಕುಮಾರಸ್ವಾಮಿ ರೈತರ ಸಾಲ ಮನ್ನಾ, ಸ್ವ-ಸಹಾಯ ಸಂಘಗಳ ಸಂಪೂರ್ಣ ಸಾಲ ಮನ್ನಾ, ಆಟೋ ಚಾಲಕರಿಗೆ ಮಾಸಿಕ ಸಹಾಯ ಧನ, ಹಿರಿಯ ನಾಗರಿಕರಿಗೆ ತಿಂಗಳಿಗೆ ರು.5 ಸಾವಿರ ಮಾಶಾಸನ, ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಎಲೆಕ್ಟ್ರಿಕ್ ಸ್ಕೂಟರ್, ರೈತರ ಕೃಷಿಗೆ ಏಕರೆಗೆ ಹತ್ತು ಸಾವಿರ ಸಹಾಯಧನ ಹಾಗೂ ಇನ್ನೂ ಹತ್ತಾರು ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದಾರೆ,ಆದ್ದರಿಂದ ಈ ಬಾರಿ ಜೆಡಿಎಸ್ ಬೆಂಬಲಿಸಬೇಕೆಂದು ಹೇಳಿದರು.

ಕುಶಾಲನಗರ ತಾಲೂಕಿನ ಜೆಡಿಎಸ್ ಅಧ್ಯಕ್ಷ ಪಿ.ಡಿ. ರವಿಕುಮಾರ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಜಾಸಿರ್, ಜಿಲ್ಲಾ ಘಟಕದ ಉಪಾಧ್ಯಕ್ಷ ಚಂದ್ರು, ಮುಖಂಡರಾದ ಗಿರೀಶ್ ಮುಂತಾದವರು ಇದ್ದರು.

0 0 votes
Article Rating
Subscribe
Notify of
guest
0 Comments
Inline Feedbacks
View all comments