ಮಡಿಕೇರಿ: ನಗರದ ಜಿಲ್ಲಾ ಪಂಚಾಯಿತಿ ಬಳಿ (ಗೃಹ ಮಂಡಳಿ ಹತ್ತಿರ) ಭಾರತ ಚುನಾವಣಾ ಆಯೋಗದಿಂದ ಸುಮಾರು 4.25 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ‘ವಿದ್ಯುನ್ಮಾನ ಮತಯಂತ್ರಗಳ ಉಗ್ರಾಣ’ವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೋಮವಾರ ಉದ್ಘಾಟಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಚುನಾವಣಾ ತಹಶೀಲ್ದಾರ್ ರವಿಶಂಕರ, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಎಇಇ ದ್ರುವರಾಜು, ಜೂನಿಯರ್ ಎಂಜಿನಿಯರ್ ಸತೀಶ್, ಚುನಾವಣಾ ಶಿರಸ್ತೇದಾರ್ ಪ್ರಕಾಶ್ ಇತರರು ಇದ್ದರು.
ಮತ ಎಣಿಕೆ ಪೂರ್ಣಗೊಂಡ ನಂತರ ವಿದ್ಯುನ್ಮಾನ ಮತಯಂತ್ರಗಳನ್ನು ಸೂಕ್ತ ಭದ್ರತೆಯೊಂದಿಗೆ ಈ ಉಗ್ರಾಣದಲ್ಲಿ ಇಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.