ಕಾಳು ಮೆಣಸುವಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು: ಕೆ.ವಿ.ಕೆ. ಸಲಹೆ

Reading Time: 3 minutes

* ಚಿಬ್ಬು ರೋಗವನ್ನು ಹತೋಟಿ ಮಾಡಲು ಕಾರ್ಬೆಂಡೆಜಿಮ್ + ಮ್ಯಾಂಕೋಜೆಬ್ (ಸಾ¥sóï) 2 ಗ್ರಾಂ ಪ್ರತಿ ಲೀಟರ್ ನೀರಿಗೆ ಬೆರಸಿ ಸಿಂಪಡಿಸುವುದು.

*ರೋಗ ಬಾಧೆಯಿಂದ ಬಳಲಿ ಸತ್ತು ಹೋದ ಬಳ್ಳಿಗಳನ್ನು ಬೇರು ಸಮೇತ ಕಿತ್ತು ತೋಟದಿಂದ ಹೊರಗೊಯ್ದು ನಾಶಪಡಿಸಬೇಕು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

*ಪ್ರತೀ ಬಳ್ಳಿಗೆ 50 ರಿಂದ 60 ಗ್ರಾಂ ಟ್ರೈಕೋಡರ್ಮ ಎಂಬ ಜೈವಿಕ ಶಿಲೀಂದ್ರವನ್ನು 1 ಕೆ.ಜಿ ಬೇವಿನ ಹಿಂಡಿ ಅಥವಾ 5 ಕೆ.ಜಿ ಕೊಟ್ಟಿಗೆ ಗೊಬ್ಬರದಲ್ಲ್ಲಿ ಮಿಶ್ರಣ ಮಾಡಿ ಬುಡಕ್ಕೆ ಹಾಕಬೇಕು ಅಥವಾ 4 ಕೆ.ಜಿ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹ ಮತ್ತು ಒಂದು ಕೆ.ಜಿ ಬೆಲ್ಲವನ್ನು 200 ಲೀಟರ್ ನೀರಿನಲ್ಲಿ ಮಿಶ್ರಣ ಮಾಡಿ ಗಿಡದ ಬುಡ ಭಾಗಕ್ಕೆ ನೇರವಾಗಿ (4 ರಿಂದ 5 ಲೀಟರ್‍ನಷ್ಟು) ಸುರಿಯಬೇಕು.

*ಬೇಸಾಯ ಕ್ರಮಗಳನ್ನು ಅನುಸರಿಸುವಾಗ ಬಳ್ಳಿಯ ಬೇರುಗಳಿಗೆ ಗಾಯಗಳಾಗದಂತೆ ನೋಡಿಕೊಳ್ಳಬೇಕು.

*ಮುನ್ನೆಚ್ಚರಿಕೆಯಾಗಿ ಮುಂಗಾರಿಗೆ ಮುನ್ನ ಬಳ್ಳಿ, ಎಲೆ ಮತ್ತು ಕಾಂಡ ಪೂರ್ಣ ತೊಯ್ಯುವಂತೆ ಶೇ. 1 ರ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡಬೇಕು.

*ಟ್ರೈಕೋಡರ್ಮ ಅಥವಾ ಅರ್ಕಾ ಸೂಕ್ಷ್ಮಾಣು ಜೀವಿಗಳ ಸಮೂಹವನ್ನು ಬುಡಕ್ಕೆ ಹಾಕದಿದ್ದರೆ ಪ್ರತಿ ಬಳ್ಳಿಗೆ 3 ರಿಂದ 5 ಲೀಟರ್ ಕಾಪರ್ ಆಕ್ಸಿಕ್ಲೋರೈಡ್ (ಬ್ಯಾರಲ್‍ಗೆ 500 ಗ್ರಾಂ) ದ್ರಾವಣದಿಂದ ಬಳ್ಳಿಯ ಬುಡದ ಭಾಗವನ್ನು ನೆನೆಸಬೇಕು ಮತ್ತು ಶೇ. 1 ರ ಬೋರ್ಡೊ ದ್ರಾವಣ ಅಥವಾ 3.0 ಮಿ. ಲಿ. ಪೊಟ್ಯಾಸಿಯಂ ಪಾಸ್ಪೋನೇಟ್‍ನ್ನು ಪ್ರತಿ ಲೀಟರ್ ನೀರಿಗೆ ಬೆರಸಿದ ದ್ರಾವಣವನ್ನು ಎಲೆಗಳಿಗೆ ಸಿಂಪರಣೆÉ ಮಾಡಬೇಕು.

*ಶಿಪಾರಸ್ಸು ಮಾಡಿದ ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೊಡಬೇಕು. ಪ್ರತಿ ಗಿಡಕ್ಕೆ 300 ಗ್ರಾಂ ಯೂರಿಯಾ, 275 ಗ್ರಾಂ ಶಿಲಾರಂಜಕ ಮತ್ತು 450 ಗ್ರಾಂ ಎಂ.ಓ.ಪಿನ್ನು ಕೊಡಬೇಕು.ಮೇಲೆ ತಿಳಿಸಿರುವ ಪ್ರಮಾಣದ ಗೊಬ್ಬರವು ಒಂದು ಬಳ್ಳಿಗೆ ಒಂದು ವರ್ಷಕ್ಕೆ ಕೊಡಬೇಕಾದ ಪ್ರಮಾಣವಾಗಿದ್ದು ಮೊದಲನೆ ಕಂತನ್ನು ಜೂನ್ ತಿಂಗಳಿನಲ್ಲಿ ಎರಡನೆ ಕಂತಿನ ಗೊಬ್ಬರವನ್ನು ಆಗಸ್ಟ್ ತಿಂಗಳಿನಲ್ಲಿ ಕೊಡಬೇಕು.

*ನೆಲದ ಮೇಲೆ ಹರಡಿರುವ ಹಾಗೂ ಹೆಚ್ಚಾದ ಕವಲು ಬಳ್ಳಿಗಳನ್ನು ಮುಂಗಾರಿಗೆ ಮುನ್ನ ಕತ್ತರಿಸಿ ತೆಗೆಯಬೇಕು. ಉಳಿದ ಬಳ್ಳಿಗಳನ್ನು ಆಶ್ರಯ ಮರಕ್ಕೆ ಕಟ್ಟಿ ಬೆಳೆಯಲು ಬೀಡಬೇಕು. ಕತ್ತರಿಸಿದ ಭಾಗಕ್ಕೆ ಕಾಪರ್ ಆಕ್ಸಿಕ್ಲೋರೈಡ್ ಪೇಸ್ಟನಿಂದ ಲೇಪನ ಮಾಡಬೇಕು.

*ಕಾಫಿ ಮತ್ತು ಅಡಿಕೆ ತೋಟಗಳಲ್ಲಿ ಒಂದಕ್ಕಿಂತ ಹೆಚ್ಚು ತಳಿಗಳಿರುವಂತೆ ಕಾಳುಮೆಣಸು ಬಳ್ಳಿಗಳನ್ನು ನಾಟಿ ಮಾಡಬೇಕು. ಬಳ್ಳಿಯ ಗಾತ್ರ ಹೆಚ್ಚಿಸಲು 5-8 ಬಳ್ಳಿಗಳನ್ನು ನಾಟಿಮಾಡುವುದು.

*ಜಂತುಹುಳುಗಳ ಬಾಧೆಯನ್ನು ತಪ್ಪಿಸಲು (ನಿಧಾನ ಸೊರಗು ರೋಗ) ಮಳೆಗಾಲ ಪ್ರಾರಂಭವಾಗುವುದಕ್ಕಿಂತ ಮುಂಚೆ ಪ್ರತೀ ಬಳ್ಳಿಗೆ 1 ಕಿ. ಗ್ರಾಂ ಬೇವಿನ ಹಿಂಡಿ ಗಿಡದ ಬುಡಕ್ಕೆ ಹಾಕಬೇಕು.

ಹೆಚ್ಚಿನ ಮಾಹಿತಿಗೆ ಪ್ರಧಾನ ವಿಜ್ಞಾನಿ ಮತ್ತು ಮುಖ್ಯಸ್ಥರು, ಐ.ಸಿ.ಎ.ಆರ್-ಕೃಷಿ ವಿಜ್ಞಾನ ಕೇಂದ್ರ, ಗೋಣಿಕೊಪ್ಪಲು, ಕೊಡಗು ಜಿಲ್ಲೆ, ದೂರವಾಣಿ: 08274-247274 ನ್ನು ಸಂಪರ್ಕಿಸಬಹುದು.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
5 1 vote
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments