Reading Time: 2 minutes
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಮಡಿಕೇರಿ ಜೂ.06: ಅಪ್ಪಂಗಳದ ಐಸಿಎಆರ್-ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ, ಪ್ರಾದೇಶಿಕ ಕೇಂದ್ರದ ವತಿಯಿಂದ ಸೋಮವಾರ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಹಣ್ಣಿನ ಮರದ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ವಿಜ್ಞಾನಿ ಡಾ.ಬಾಲಾಜಿ ರಾಜ್ ಕುಮಾರ್ ಅವರು ಮಾತನಾಡಿ ಲೈಫ್ ಮಿಷನ್ ವಿಷಯದ ಕುರಿತು ವಿವರಿಸಿದರು ಹಾಗೂ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಹೆಚ್ಚು ಮರಗಳನ್ನು ನೆಡುವುದು, ನೈಸರ್ಗಿಕ ಸಂಪನ್ಮೂಲಗಳು ಮತ್ತು ಜಲಮೂಲಗಳ ಸಂರಕ್ಷಣೆಗೆ ಒತ್ತು ನೀಡುವಂತೆ ಕರೆ ನೀಡಿದರು.
ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು. ನಂತರ ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು ಬೆಟ್ಟಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸೇರಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು.