ಕನ್ನಂಡ ಎ. ಸಂಪತ್, ಸಹಕಾರಿಗಳು: ಮಡಿಕೇರಿ – Madikeri

Reading Time: 6 minutes

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಮಡಿಕೇರಿ ನಗರದವರಾದ ಕನ್ನಂಡ ಎ. ಸಂಪತ್‌ ರವರು  ಪ್ರಸ್ತುತ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕರಾಗಿ ಹಾಗೂ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿ ಪ್ರಸ್ತುತ  ಸೇವೆ ಸಲ್ಲಿಸುತ್ತಿದ್ದಾರೆ. 

ಸರಿ ಸುಮಾರು 30 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಸೇವೆ ಸ್ಲಲಿಸುತ್ತಿರುವ ಕನ್ನಂಡ ಎ. ಸಂಪತ್‌ರವರನ್ನು “ಸರ್ಚ್‌ ಕೂರ್ಗ್‌ ಮೀಡಿಯಾ”ವು ಪ್ರಸ್ತುತ ಪಡಿಸಿರುವ “ಕೊಡಗು ಸಹಕಾರ ದರ್ಶನ” ಎಂಬ ಕೊಡಗಿನ ಸಹಕಾರ ಚಳುವಳಿಯ ಡಿಜಿಟಲ್‌ ದಾಖಲೆಗೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಇವರು “ನಾನು ಮೊದಲಿಗೆ ಸಹಕಾರ ಕ್ಷೇತ್ರಕ್ಕೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಕರ್ನಾಟಕ ಸರ್ಕಾರದ ಮಾಜಿ ವಿಧಾನ ಸಭಾ ಸದಸ್ಯರಾದ ಶ್ರೀ ಕೆ.ಜಿ. ಬೋಪ್ಪಯ್ಯನವರು ಪ್ರಮುಖ ಪಾತ್ರವಹಿಸಿದ್ದರು ಎಂದರು. 2013 ರಲ್ಲಿ ನಾನು ಮೊದಲಿಗೆ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೆಶಕನಾಗಿ ಆಯ್ಕೆಯಾದೆ. ಅಲ್ಲಿಂದ 2013 ರಲ್ಲಿ  ಕೊಡಗು ಡಿ.ಸಿ.ಸಿ. ಬ್ಯಾಂಕಿನ ಕೃಷಿಯೇತರ ಪತ್ತಿನ ಸಹಕಾರ ಸಂಘದ ಸ್ಥಾನಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೆಶಕನಾಗಿ ಆಯ್ಕೆಯಾದೆ. ತದ ನಂತರ 2018ರಲ್ಲಿ ನಡೆದ  ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್‌  ಹಾಗೂ   ಕೊಡಗು ಡಿ.ಸಿ.ಸಿ. ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಿ ನಿರ್ದೆಶಕನಾಗಿ ಎರಡನೇ ಅವಧಿಗೆ ಆಯ್ಕೆಯಾದೆ ಎಂದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಂತರ ಮಾತನಾಡಿದ ಕನ್ನಂಡ ಸಂಪತ್‌ರವರು ನಾನು ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕನಾದ ಸಂದರ್ಭದಲ್ಲಿಆಡಳಿತ ಮಂಡಳಿಗೆ ಹೆಚ್ಚಿನ ಮಟ್ಟದಲ್ಲಿ ಸಹಕಾರ ನೀಡಿ ಬ್ಯಾಂಕಿನ ಅಭಿವೃದ್ದಿಗೆ ಜೊತೆಯಾಗಿದ್ದೇನೆ. ಹಾಗೆ ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ಅಭಿವೃದ್ದಿಗೂ ಆಡಳಿತ ಮಂಡಳಿ ಜೊತೆಗೂಡಿ ಹೆಚ್ಚಿನ ಸಹಕಾರವನ್ನು ನೀಡುತ್ತಿದ್ದೇನೆ ಎಂದರು.

2019-20 ರ ಸಾಲಿನಲ್ಲಿ ಕೊಡಗು ಡಿ.ಸಿ.ಸಿ. ಬ್ಯಾಂಕ್ 8 ಕೋಟಿಯಷ್ಟು ಲಾಭವನ್ನು ಗಳಿಸಿದ್ದು, ಗರಿಷ್ಠ ಮಟ್ಟದ ಸಾವಿರ ಕೋಟಿಯಷ್ಟು ಠೇವಣಿಯನ್ನು ಕೊಡಗು ಡಿ.ಸಿ.ಸಿ. ಬ್ಯಾಂಕ್ ಸಂಗ್ರಹಿಸಿದೆ ಎಂದು ತಿಳಿಸಿದ  ಕನ್ನಂಡ ಸಂಪತ್‌ರವರು ಕೊಡಗು ಡಿ.ಸಿ.ಸಿ. ಬ್ಯಾಂಕ್‌  ಶತಮಾನದ ಆಚರಿಸಿದ ಸಂದರ್ಭದ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ನನಗೆ ಹೆಮ್ಮೆಯೆನಿಸುತ್ತಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕೊಡಗು ಡಿ.ಸಿ.ಸಿ. ಬ್ಯಾಂಕ್‌ನ 21 ಶಾಖೆಗಳು ಲಾಭದಲ್ಲಿದ್ದು, 2019, 2020, 2021 ರಲ್ಲಿ ಬಾಳೆಲೆ, ಟಿ-ಶೆಟ್ಟಿಗೇರಿ, ಕೊಡ್ಲಿಪೇಟೆ, ಹೆಬ್ಬಾಲೆಯಲ್ಲಿ ನೂತನ ಶಾಖೆಗಳನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ ಕನ್ನಂಡ ಸಂಪತ್‌ರವರು ಬ್ಯಾಂಕಿನ ವತಿಯಿಂದ ಜಿಲ್ಲೆಯಾದ್ಯಂತ ಒಟ್ಟು 15 ಎಟಿಎಂಗಳು ಕಾರ್ಯನಿರ್ವಹಿಸುತ್ತಿದೆ ಎಂದರು.

ಪೊನ್ನಂಪೇಟೆ ಹಾಗೂ ಅಮ್ಮತ್ತಿಯಲ್ಲಿ ಸ್ವಂತ ಕಟ್ಟಡವನ್ನು ಖರೀದಿಸಿ ಅಲ್ಲಿನ ಬ್ಯಾಂಕಿನ ಶಾಖೆಗಳನ್ನು ಸ್ವಂತ ಕಟ್ಟಡಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಕನ್ನಂಡ ಸಂಪತ್‌ರವರು ಈ ಸಂದರ್ಭದಲ್ಲಿ ತಿಳಿಸಿದರು. ಭಾಗಮಂಡಲ ಮತ್ತು ಮಾದಾಪುರದಲ್ಲಿ ಹೊಸ ಶಾಖೆಗಳ ಪ್ರಾರಂಭಕ್ಕೆ ಪ್ರಯತ್ನ ಸಾಗುತ್ತಿದೆ ಎಂದರು.

2021ರ ಜೂನ್ 26ಕ್ಕೆ ಕೊಡಗು ಡಿ.ಸಿ.ಸಿ. ಬ್ಯಾಂಕ್ ಶತಮಾನವನ್ನು ಆಚರಿಸಿದ ನೆನಪಿನಲ್ಲಿ 9 ಕೋಟಿ ವೆಚ್ಚದಲ್ಲಿ ಆಡಳಿತ ಕಚೇರಿಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿದೆ ಎಂದು ತೀಳಿಸಿದ  ಕನ್ನಂಡ ಸಂಪತ್‌ರವರು, ಗ್ರಾಮೀಣ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಅತ್ಯಾಧುನಿಕ ತಂತ್ರಜ್ಞಾನದಿಂದ ಕೂಡಿದ ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕೊಡಗಿನ ಗ್ರಾಮ ಗ್ರಾಮಗಳಲ್ಲಿ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ನನ್ನ ಅಧಿಕಾರದ ಆಡಳಿತಾವಧಿಯಲ್ಲಿ ಕೊಡಗು ಡಿ.ಸಿ.ಸಿ ಬ್ಯಾಂಕನ್ನು ರಾಜ್ಯಮಟ್ಟದಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಿಸಲು ಕೊಡಗು ಡಿ.ಸಿ.ಸಿ. ಬ್ಯಾಂಕಿನ ಆಡಳಿತ ಮಂಡಳಿಗೆ ನನ್ನ.ಪೂರ್ಣಮಟ್ಟದ ಸಹಕಾರ ನೀಡುತ್ತೇನೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಮಡಿಕೇರಿ ಪಟ್ಟಣ ಸಹಕಾರ ಬ್ಯಾಕಿನಿಂದ ಕೃಷಿಯೇತರರಿಗೆ ಸಾಲ ನೀಡುವಲ್ಲಿ ಪ್ರಮುಖ ಆದ್ಯತೆ ಹಾಗೂ ಉತ್ತಮ ರೀತಿಯಲ್ಲಿ ಸದಸ್ಯರರಿಗೆ ಬ್ಯಾಂಕಿನ ಸೇವೆ ನೀಡುವಲ್ಲಿ ಪ್ರಯತ್ನ ಮಾಡಲಾಗುವುದು ಎಂದ ಕನ್ನಂಡ ಸಂಪತ್‌ರವರು ಟೌನ್‌ ಬ್ಯಾಂಕ್‌ ಕೂಡ ಶತಮಾನೋತ್ಸವ ಕಂಡಿದ್ದು, ಈ ಸಂದರ್ಭದಲ್ಲಿ ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸುತ್ತಿರುವುದು ನನ್ನ ಸೌಭಾಗ್ಯವೆಂದರು.

ಸಹಕಾರ ಕ್ಷೇತ್ರಕ್ಕೆ ತನ್ನದೆ ಆದ ಇತಿಹಾಸವಿದ್ದು, ಪಾರದಶರ್ಕ ಆಡಳಿತ, ಸೇವಾ ಮನೋಭಾವನೆಯಿಂದ ಕೂಡಿದ ಸಹಕಾರಿಗಳು ಇದ್ದರೆ ಸಹಕಾರ ಕ್ಷೇತ್ರ ಇನ್ನಷ್ಟು ಅಭಿವೃದ್ಧಿ ಹೊಂದುತ್ತದೆ ಎಂದ ಕನ್ನಂಡ ಸಂಪತ್‌ರವರು, ಸರ್ಕಾರದ ಹಸ್ತಕ್ಷೇಪ ಸಹಕಾರ ಸಂಘಗಳಲ್ಲಿ ಇರಬಾರದು ಹಾಗೆ ಸಹಕಾರ ಕ್ಷೇತ್ರವು ಸಹಕಾರ ಕ್ಷೇತ್ರವಾಗಿಯೇ ಉಳಿಯಬೇಕು ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು.  

ಸಹಕಾರಿ ಕ್ಷೇತ್ರಕ್ಕೆ ಹೆಚ್ಚು ಹೆಚ್ಚು ಯುವಶಕ್ತಿಯು ಪಾಲ್ಗೊಂಡು ಸೇವಾ ಮನೋಭಾವದಿಂದ ಸ್ವಾರ್ಥರಹಿತವಾಗಿ ಆತ್ಮತೃಪ್ತಿಯಿಂದ ಸೇವೆ ಸಲ್ಲಿಸಬೇಕು ಹಾಗೂ ಹಿರಿಯ ಸಹಕಾರಿಗಳಿಂದ ಸಲಹೆ ಸೂಚನೆಗಳನ್ನು ಪಡೆದು ಸಹಕಾರ ಕ್ಷೇತ್ರದ ಪ್ರಗತಿಗೆ ತಮ್ಮನ್ನು ತೊಡಿಗಿಸಿಕೊಳ್ಳಬೇಕು ಎಂದು ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡುತ್ತಿರುವ  ಭಾವಿ ಯುವಶಕ್ತಿಗೆ ಕನ್ನಂಡ ಸಂಪತ್‌ರವರು, ತಮ್ಮ ಸಂದೇಶವನ್ನು ಈ ಸಂದರ್ಭದಲ್ಲಿ ನೀಡಿದರು.

ಕನ್ನಂಡ ಸಂಪತ್‌ರವರು ಸಹಕಾರ ಕ್ಷೇತ್ರದಲ್ಲಿ ಕೊಡಗು ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿ, ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿ, ಕೊಡಗು ಸಹಕಾರ ಯೂನಿಯನ್‌ ನಿರ್ದೇಶಕರಾಗಿ ಹಾಗೂ ಪಾರಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಾಗಿ ಸಹಕಾರ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ರಾಜಕೀಯವಾಗಿ ಭಾರತೀಯ ಜನತಾ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದಾರೆ. ಸಾಮಾಜಿಕ ಕ್ಷೇತ್ರದಲ್ಲಿ ಮಡಿಕೇರಿ ಕೊಡವ ಸಮಾಜದ ಗೌರವ ಕಾರ್ಯದರ್ಶಿಗಳಾಗಿ ಸೇವೆ. ಕನ್ನಂಡ ಫ್ಯಾಮಿಲಿ ಫಂಡ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಧಾರ್ಮಿಕ ಕ್ಷೇತ್ರದಲ್ಲಿ ಮಡಿಕೇರಿ ಮುತ್ತಪ್ಪ ದೇವಾಲಯದ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಶೈಕ್ಷಣಿಕ ಕ್ಷೇತ್ರದಲ್ಲಿ ಮಡಿಕೇರಿ ಜನರಲ್ ತಿಮ್ಮಯ್ಯ‌ ಪಬ್ಲಿಕ್ ಸ್ಕೂಲ್‌ ಇದರ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮೂಲತಃ ಕೃಷಿಕರಾಗಿರುವ ಕನ್ನಂಡ ಸಂಪತ್‌ರವರ ತಂದೆ ದಿ. ಕನ್ನಂಡ ಮೆಕ್‌ಡೊವೆಲ್ ಮಣಿ ಅಚ್ಚಯ್ಯ, ತಾಯಿ ದಿ. ಜಾನಕಿ. ಪತ್ನಿ ಸುನಿತಾ ಸಂಪತ್‌ ಕೊಡಗು ಮಹಿಳಾ ಬ್ಯಾಂಕಿನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಿರಿಯ ಮಗ ರೊಷನ್‌ ಚಂಗಪ್ಪ ಎಂ.ಬಿ.ಎ. ಪದವಿದರಾಗಿದ್ದು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ಹಿರಿಯ ಸೊಸೆ ದೀಪ್ನಾ ಎಲ್.ಎಲ್.ಬಿ. ಪದವೀದರಾಗಿದ್ದಾರೆ. ಮೊಮ್ಮಗಳು  ಶಿಯಾನ ಮುತ್ತಮ್ಮ. ಕಿರಿಯ ಮಗ ರಿವಿನ್‌ ಮಾಚ್ಚಯ್ಯ ಬಿ.ಎ. ಪದವೀದರಾಗಿದ್ದು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದಾರೆ. ಕಿರಿಯ ಸೊಸೆ ಎಲ್.ಎಲ್.ಬಿ. ವ್ಯಾಸಂಗ ನಿರತರಾಗಿದ್ದಾರೆ. ಮೊಮ್ಮಗಳು ಯೋಷ್ನ ದೇಚ್ಚಮ್ಮ.

ಪ್ರಸ್ತುತ ಕನ್ನಂಡ ಸಂಪತ್‌ರವರು ಕುಟುಂಬ ಸಮೇತ ಮಡಿಕೇರಿ ನಗರದ ಮಹದೇವೆಪೇಟೆಯಲ್ಲಿ ನೆಲೆಸಿದ್ದಾರೆ. ಇವರ ಸಹಕಾರ, ರಾಜಕೀಯ, ಸಾಮಾಜಿಕ‌, ಧಾರ್ಮಿಕ ಹಾಗೂ  ಶೈಕ್ಷಣಿಕ  ಸೇವೆಯು ಹೀಗೆ ನಿರಂತರವಾಗಿ ಮುಂದುವರೆಯಲಿ ಎಂದು “ಸರ್ಚ್‌ ಕೂರ್ಗ್ ಮೀಡಿಯಾ” ವು ಹಾರೈಸುತ್ತದೆ.

ಸಂದರ್ಶನ ದಿನಾಂಕ: 13- 06 -2023

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments