ತಲೆಕಾವೇರಿಯನ್ನು ಪ್ರವಾಸೋದ್ಯಮ ಪಟ್ಟಿಯಿಂದ ಕೈಬಿಟ್ಟು ತೀರ್ಥಕ್ಷೇತ್ರವಾಗಿ ಘೋಷಿಸಲು ಸರ್ಕಾರಕ್ಕೆ ಕೊಡವಾಮೆರ ಕೊಂಡಾಟ ಸಂಘಟನೆ ಮನವಿ

Reading Time: 2 minutes

ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ವಿರಾಜಪೇಟೆ ಕ್ಷೇತ್ರದ ಶಾಸಕರು ಆದ ಶ್ರೀ ಅಜ್ಜಿಕುಟ್ಟಿರ ಪೊನ್ನಣ್ಣ ಅವರ ಮೂಲಕ ಸರ್ಕಾರಕ್ಕೆ ಆಗ್ರಹ.
ಕೊಡವರ ಕುಲದೇವಿ, ಕೊಡಗಿನ ಬಹುಪಾಲು ಜನರ ಆರಾಧ್ಯ ಮಾತೆ, ದಕ್ಷಿಣ ಕರ್ನಾಟಕದ ಜೀವನದಿ ತಾಯಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಕ್ಷೇತ್ರವನ್ನು ಪ್ರವಾಸೋದ್ಯಮ ಕ್ಷೇತ್ರಪಟ್ಟಿಯಿಂದ ಕೈ ಬಿಟ್ಟು ಪುಣ್ಯ ತೀರ್ಥಕ್ಷೇತ್ರವೆಂದು ಮುಂಗಡ ಪತ್ರದಲ್ಲಿ ಘೋಷಿಸಬೇಕೆಂದು ಕೊಡವಾಮೆರ ಕೊಂಡಾಟ ಸಂಘಟನೆ ಸರ್ಕಾರಕ್ಕೆ ಮನವಿ ಮಾಡಿದೆ. ಅಲ್ಲದೆ ಸಂಗಮ ಕ್ಷೇತ್ರ ಭಾಗಮಂಡಲವನ್ನು ದೇವಳ ನಗರ (ಟೆಂಪಲ್ ಟೌನ್ )ಎಂದು ಸರ್ಕಾರ ಮುಂದಿನ ಮುಂಗಡಪತ್ರದಲ್ಲಿ ಘೋಷಿಸುವುದಲ್ಲದೆ ಪಾರಂಪರಿಕ ಧಾರ್ಮಿಕ ಕ್ಷೇತ್ರವಾಗಿ ಮೂಲತನಕ್ಕೆ ಮತ್ತು ಸ್ಥಳೀಯರ ಬದುಕಿಗೆ ಧಕ್ಕೆ ಬಾರದಂತೆ ವಿಶೇಷ ಅಭಿವೃದ್ದಿಯ ಪ್ಯಾಕೇಜ್ ಘೋಷಿಸುವಂತೆ ಕ್ರಮವಹಿಸಬೇಕೆಂದು ಹಾಗೂ ಕಳೆದ ಹಲವಾರು ತಿಂಗಳುಗಳಿಂದ ರಚಿಸದೆ ಇರುವ ತಲಕಾವೇರಿ ಭಾಗಮಂಡಲ ವ್ಯವಸ್ಥಾಪನ ಸಮಿತಿಯನ್ನು ಒಳಗೊಂಡಂತೆ ಆದಷ್ಟು ಬೇಗ ರಚಿಸಲು ಸರ್ಕಾರ ಮುಂದಾಗಬೇಕೆಂದು, ಕ್ಷೇತ್ರದ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಪೊನ್ನಣ್ಣ ಅವರ ಮೂಲಕ ಸರ್ಕಾರಕ್ಕೆ ಕೊಡವಾಮೆರ ಕೊಂಡಾಟ ಸಂಘಟನೆ ಮನವಿ ಮಾಡಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments