ನಾಪೋಕ್ಲು : ದೇಶದ 77ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಾಪೋಕ್ಲು ವಿಭಾಗದ ವಿವಿಧೆಡೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ನಾಪೋಕ್ಲು ಸಮೀಪದ ಚೆರಿಯಪರಂಬು ಸುನ್ನಿ ಮುಸ್ಲಿಂ ಜಮಾಅತ್ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಮಾಅತ್ ಅಧ್ಯಕ್ಷ ಝುಬೈರ್ ದ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಇತ್ತೀಚಿಗೆ ಪೊಲೀಸ್ ಇಲಾಖೆಯಿಂದ ನಿವೃತಾರಾದ ಎಎಸ್ಐ ಮೊಹಿದೀನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ನಾಪೋಕ್ಲು ರೇಂಜ್ ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕೊಳಕೇರಿ ಮುಸ್ಲಿಂ ಜಮಾಅತ್ ಅಧೀನದಲ್ಲಿರುವ ದಾರು ಇಸ್ಲಾಂ ಮದರಸದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಜಮಾಅತ್ ಕಾರ್ಯದರ್ಶಿ ರಫೀಕ್ ದ್ವಜಾರೋಹಣ ನೆರವೇರಿಸಿದರು. ಬಳಿಕ ಮಕ್ಕಳಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದ್ವಜಾರೋಹಣವನ್ನು ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ. ಎ. ಹಾರಿಸ್ ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾಜಿ ಸೈನಿಕ ನಾಯಕಂಡ ಬೋಪಣ್ಣ ಹಾಗೂ ಅರೆಯಡ ಕಾಳಯ್ಯ ಅವರನ್ನು ಶಾಲೆಯ ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಬಳಿಕ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಅದರಂತೆ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ಸ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರಾಂಶುಪಾಲರಾದ ಗಪ್ಪಣ್ಣ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಡೆದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು.
ಈ ಸಂದರ್ಭ ನಾಪೋಕ್ಲು ಗ್ರಾಮಪಂಚಾಯಿತಿ ಅಧ್ಯಕ್ಷರು, ಸದಸ್ಯರು,ಆಯಾ ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು, ಪ್ರಾಂಶುಪಾಲರು ಶಿಕ್ಷಕ ವೃಂದವರು,ಮಸೀದಿಯ ಜಮಾಅತ್ ಆಡಳಿತ ಮಂಡಳಿ ಪದಾಧಿಕಾರಿಗಳು,ಸದಸ್ಯರು, ಮದರಸ ಪ್ರಾಧ್ಯಾಪಕರು ವಿದ್ಯಾರ್ಥಿಗಳು ಮತ್ತಿತರರು ಪಾಲ್ಗೊಂಡಿದ್ದರು.
✍️….ವರದಿ: ಝಕರಿಯ ನಾಪೋಕ್ಲು