ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಬಿರುಸಿನ ಕಾರ್ಯಾಚರಣೆ
ಚೆಯ್ಯ0ಡಾಣೆ ಆ 31. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಚೆಯ್ಯಂಡಾಣೆ ನರಿಯಂದಡ ಕೇಂದ್ರ ಪ್ರೌಢ ಶಾಲೆಯ ಚೇಲಾವರಕ್ಕೆ ತೆರಳುವ ರಸ್ತೆಯಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.
ವಿರಾಜಪೇಟೆಯ ಪೆರುಂಬಾಡಿ ಚೆಕ್ ಪೋಸ್ಟ್ ಹತ್ತಿರದ ನಿವಾಸಿ ಲಾರಿ ಚಾಲಕ ಶರ್ಫುದ್ದಿನ್ ಪಿ.ಎ.(27) ಬಂಧಿತ ಆರೋಪಿಯಾಗಿದ್ದಾನೆ.
ಚೆಯ್ಯಡಾಣೆಯ ನರಿಯಂದಡ ಕೇಂದ್ರ ಪ್ರೌಢ ಶಾಲೆಯ ಚೇಲಾವರಕ್ಕೆ ತೆರಳುವ ಪ್ರಯಾಣಿಕರ ಬಸ್ಸು ತಂಗುದಾಣ ಬಳಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನ ನಡೆಸುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 180 ಗ್ರಾಂ ಗಾಂಜಾ ವಶಪಡಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ, ಉಪ ವಿಭಾಗದ ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ