ನಾಪೋಕ್ಲು: ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಇಲ್ಲಿನ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಹಲವಾರು ಪಂದ್ಯಾಟಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ .
ಪ್ರಾಥಮಿಕ ವಿಭಾಗದಲ್ಲಿ ಬಾಲಕರ ಫುಟ್ಬಾಲ್ ಪ್ರಥಮ, ಹಾಗೂ ಬಾಲಕಿಯರು ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಶಟಲ್ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದಲ್ಲಿ ಬಾಲಕಿಯರು ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಪ್ರೌಢಶಾಲಾ ಬಾಲಕರ ವಿಭಾಗದ ಚೆಸ್ ಪಂದ್ಯಾಟದಲ್ಲಿ ಪ್ರಥಮ, 400 ಮೀಟರ್ ರಿಲೇ ವಿಭಾಗದಲ್ಲಿ ಬಾಲಕಿಯರು ಪ್ರಥಮ ಸ್ಥಾನವನ್ನು,ತ್ರಿವಿಧ ಜಿಗಿತ ಪ್ರಥಮ ಸ್ಥಾನ,ಗುಂಡು ಎಸೆತ ಪ್ರಥಮ ಸ್ಥಾನವನ್ನು ಪಡೆದು ಮುಂದೆ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕ್ರೀಡಾಕೂಟದಲ್ಲಿ ದೈಹಿಕ ಶಿಕ್ಷಕರಾಗಿ ಸುನಿಲ್ ಕಾರ್ಯನಿರ್ವಹಿಸಿದ್ದರು.
ವರದಿ: ಝಕರಿಯ ನಾಪೋಕ್ಲು