ನಾಪೋಕ್ಲು :ಇಲ್ಲಿಗೆ ಸಮೀಪದ ಬೇತುಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಗಿಡಕ್ಕೆ ನೀರು ಹಾಕುವುದರ ಮೂಲಕ ಗಣ್ಯರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆ ತಾಪಂಡ ಜಾನಕಿ ಪೌಷ್ಟಿಕ ಆಹಾರ ಸೇವನೆಯಿಂದ ಉಂಟಾಗುವ ಉಪಯೋಗಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿ ಪ್ರದರ್ಶಿಸಲಾಯಿತು.
ಬಾಲ ವಿಕಾಸ ಸಮಿತಿಯ ಸದಸ್ಯರಾದ ಅಪ್ಪೇರಿಯಂಡ ಗೌರಮ್ಮಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿ ಸದಸ್ಯರಾದ ಕಾಳೆಯಂಡ ಸಾಬ ತಿಮ್ಮಯ್ಯ, ಮಾಜಿ ಅಧ್ಯಕ್ಷೆ ಕಲ್ಯಾಟಂಡ ಸುಮಿತ್ರ, ಬೇತು ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಬೊಳ್ಳೆಪಂಡ ಆಶಾ,ಇಂದಿರಾ ನಗರದ ಆಶಾಕಾರ್ಯಕರ್ತೆ ಯರಾದ ಗಾಯತ್ರಿ, ಬಿನಿಷಾ, ಸೀಮಾ, ಸಹಾಯಕಿ ಲೀಲಾವತಿ, ಗರ್ಭಿಣಿ ಬಾಣಂತಿಯರು, ಸಂಘದ ಸದಸ್ಯರು, ಪೋಷಕರು, ಪುಟಾಣಿ ಮಕ್ಕಳು, ಗ್ರಾಮದ ಮಹಿಳೆಯರು, ಮತ್ತಿತರರು ಹಾಜರಿದ್ದರು.
ವರದಿ: ಝಕರಿಯ ನಾಪೋಕ್ಲು