ವಿವಿಧ ಬಗ್ಗೆಯ ಪೌಷ್ಟಿಕ ಆಹಾರ ತಯಾರಿಸಿ ಗಮನ ಸೆಳೆದ ಅಂಗನವಾಡಿ ಕಾರ್ಯಕರ್ತೆಯರು
ಚೆಯ್ಯ0ಡಾಣೆ, ಸೆ 13. ಸಮೀಪದ ಕರಡ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೌಶಿ ಕಾವೇರಮ್ಮ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ಅಧಿಕಾರಿ ಶೀಲಾ ಮಾತನಾಡಿ ಅಪೌಷ್ಟಿಕತೆಯನ್ನು ಹೋಗಲಾಡಿಸುವ ಉದ್ದೇಶದಿಂದ ಈ ಒಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು,ಈಗಿನ ಸನ್ನಿವೇಶದಲ್ಲಿ ಗರ್ಭಿಣಿ ಸ್ತ್ರೀಯರು, ಬಾಣಂತಿಯರು,ಮಕ್ಕಳಲ್ಲಿ ಹೆಚ್ಚಾಗಿ ರೋಗಗಳು ಕಾಣಸುವಂತದ್ದು,ಆದಕ್ಕಾಗಿ ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಪೌಷ್ಟಿಕ ಆಹಾರದ ಸೇವನೆ ಬಗ್ಗೆ ಮಾಹಿತಿ ನೀಡುವುದರ ಮೂಲಕ ಮಕ್ಕಳಿಗೆ ಬರುವ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ಈ ಕಾರ್ಯಕ್ರಮ ಅಯೋಗಿಸಲಾಗಿದೆ, ಎಲ್ಲರು ಇದರ ಸದುಪಯೋಗವನ್ನು ಪಡೆದು ಕೊಳ್ಳುವಂತೆ ತಿಳಿಸಿದರು.
ಚೆಯ್ಯಂಡಾಣೆ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಕನಕಾವತಿ ಪೌಷ್ಟಿಕ ಆಹಾರ ಸೇವನೆಯಿಂದ ಉಂಟಾಗುವ ಉಪಯೋಗಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ಮಾತೃ ವಂದನಾ ಸಂಯೋಜಕಿ ಚೈತ್ರ ಮಾತನಾಡಿ ಅಪೌಷ್ಟಿಕತೆಯನ್ನು ನಿವಾರಿಸುವ ಉದ್ದೇಶದಿಂದ ಸರಕಾರ ನಗದು ರೂಪದಲ್ಲಿ ಪ್ರೋತ್ಸಾಹ ಧನವನ್ನು ನೀಡಲಾಗುತ್ತಿದ್ದು ಗರ್ಭಿಣಿ ಸ್ತ್ರೀಗಳು ಇದರ ಸದುಪಯೋಗ ಪಡೆದು ಕೊಳ್ಳಲು ಹಾಗೂ ಹೆಣ್ಣು ಬ್ರೂಣ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ನಿಮ್ಮ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಇದನ್ನು ಪಲಾನುಭವಿಗಳಿಗೆ ತಲುಪಿಸುವಂತೆ ಮಾಡಬೇಕೆಂದರು.
ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿ ಹಾಗೂ ಹಣ್ಣು,ತರಕಾರಿ, ಸೊಪ್ಪುಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿ ಗಮನ ಸೆಳೆದರು ಹಾಗೂ ಇದರ ಉಪಯೋಗದ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ನರಿಯಂದಡ ಗ್ರಾಮ ಪಂಚಾಯಿತಿ ಸದಸ್ಯ ಬೆಪುಡಿಯಂಡ ವಿಲಿನ್ ಹಾಗೂ ನೇತ್ರಾವತಿ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿದರು.
ಈ ಸಂದರ್ಭ ಪ್ರಥಮ್ ಸಂಸ್ಥೆಯ ಶಾಲಾ ಪೂರ್ವ ಶಿಕ್ಷಣದ ತರಬೇತಿದಾರೆ ಸುರಭಿ, ಗ್ರಂಥಾಪಲಾಕಿ ರೆನ್ನಿ ಬಿಬೋ, ಅಂಗನವಾಡಿ, ಆಶಾ ಕಾರ್ಯಕರ್ತೆಯರು,
ಗ್ರಾಮದ ಮಹಿಳೆಯರು, ಮತ್ತಿತರರು ಹಾಜರಿದ್ದರು.
ಕರಡ ಅಂಗನವಾಡಿ ಕಾರ್ಯಕರ್ತೆ ಈಶ್ವರಿ ಸ್ವಾಗತಿಸಿ, ಚೆಯ್ಯಂಡಾಣೆ ಅಂಗನವಾಡಿ ಕಾರ್ಯಕರ್ತೆ ತಾರಾ ವಂದಿಸಿದರು.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ