ಚೆಯ್ಯ0ಡಾಣೆ ಸೆ 13. ನರಿಯಂದಡ ಗ್ರಾಮ ಪಂಚಾಯಿತಿಯ 2023-24 ಸಾಲಿನ ನರಿಯಂದಡ ಗ್ರಾಮದ ಬ್ಲಾಕ್ 1ರ ವಾರ್ಡ್ ಸಭೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ವಾರ್ಡ್ ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯ ಬಿದ್ದಂಡ ರಾಜೇಶ್ ಅಚ್ಚಯ್ಯ ವಹಿಸಿ ಮಾತನಾಡಿ ನಮ್ಮ ಅವಧಿಯಲ್ಲಿ ಉತ್ತಮ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಾಣ ಮಾಡಿದ್ದೇವೆ ಹಾಗೂ ಹಲವಾರು ಜನಪರ ಕಾಮಗಾರಿಗಳನ್ನು ನಡೆಸಿದ್ದೇವೆ ಇನ್ನು ಮುಂದಕ್ಕೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ ನ ಜನರ ಸಮಸ್ಯೆಗಳಿಗೆ ಸ್ವಂದಿಸುತ್ತೆನೆ ಎಂದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ ಮಾತನಾಡಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಸೌಲಭ್ಯಗಳನ್ನು ಪಡೆದು ಕೊಳ್ಳಲು ಹಾಗೂ ಇರುವ ಸರಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಗ್ರಾಮಸ್ಥ ಪರವಾಗಿ ಬೋವೇರಿಯಂಡ ಬೀನಾ ಮಾತನಾಡಿ ನಮ್ಮ ಮನೆಯ ಸಮೀಪ ನೀರಿನ ಸಮಸ್ಯೆ ತಲೆದೊರಿದ್ದು ನೀರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗ್ರಾ.ಪಂ ಸದಸ್ಯ ರಾಜೇಶ್ ಅಚ್ಚಯ್ಯ ಟ್ಯಾಂಕ್ ನಿರ್ಮಿಸಲು ಸ್ಥಳಾವಕಾಶದ ಕೊರೆತೆ ಇದೆ ಟ್ಯಾಂಕ್ ನಿರ್ಮಿಸಲು ಸ್ಥಲಾವಕಾಶ ನೀಡಿದರೆ ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಗ್ರಾಮಸ್ಥರಿಂದ ವಸತಿ/ವಸತಿ ರಹಿತ ಪಲಾನುಭವಿಗಳಿದ ಹಾಗೂ ವಿವಿಧ ಯೋಜನೆಗಳಿಗೆ ಅರ್ಜಿ ಸ್ವೀಕರಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ,ಗ್ರಾ. ಪಂ ಸದಸ್ಯೆ ಪುಷ್ಪ, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತಿತ್ತರರು ಉಪಸ್ಥಿತರಿದ್ದರು.
ಸಭೆಯಲ್ಲಿ ಸ್ವಾಗತ ವನ್ನು ದಿನೇಶ್ ವಂದನೆಯನ್ನು ಆಶಾ ಕುಮಾರಿ ನಿರ್ವಹಿಸಿದರು.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ