Reading Time: < 1 minute
ಕಡ0ಗ: ಕಡಂಗ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಆಯುಷ್ ಇಲಾಖೆಯ ವೈದ್ಯಧಿಕಾರಿ ಡಾ. ಶೈಲಜಾ ಮಾತಾನಾಡಿ ಆಹಾರದಲ್ಲಿರುವ ಪೌಷ್ಟಿಕಾ0ಶದ ಕುರಿತು ಸಂಕ್ಷಿಪ್ತವಾಗಿ ವಿವರಿಸಿದರು.
ಶಾಲೆಯ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಪಿಎಂ ಶಾಂತಕುಮಾರಿ ರವರು ಪೌಷ್ಟಿಕ ಆಹಾರ ಸೇವನೆಯಿಂದ ಉಂಟಾಗುವ ಉಪಯೋಗಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರಗಳನ್ನು ತಯಾರಿಸಿ ಹಾಗೂ ಹಣ್ಣು,ತರಕಾರಿ, ಸೊಪ್ಪುಗಳನ್ನು ವೇದಿಕೆಯಲ್ಲಿ ಪ್ರದರ್ಶಿಸಿ ಗಮನ ಸೆಳೆದರು ಹಾಗೂ ಇದರ ಉಪಯೋಗದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ವರದಿ: ನೌಫಲ್ ಕಡಂಗ