ನಾಪೋಕ್ಲು ಪೊಲೀಸರ ಕಾರ್ಯಾಚರಣೆ 2,26ಕೆಜಿ ಗಾಂಜಾದೊಂದಿಗೆ ಅಸ್ಸಾಂ ಮಹಿಳೆ ಬಂಧನ

ನಾಪೋಕ್ಲು : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಅಸ್ಸಾಂ ರಾಜ್ಯದ ಮಹಿಳೆಯನ್ನು ಮಾಲು ಸಹಿತ ಬಂಧಿಸುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲುವಿನ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಸ್ಸಾಂ ರಾಜ್ಯದ ಉದಲ್ ಗುರಿ ನಿವಾಸಿ ದಿಲ್ಜಾನ್ ಬೇಗಂ (44) ಬಂಧಿತ ಆರೋಪಿಯಾಗಿದ್ದಾಳೆ.

ನಾಪೋಕ್ಲು ಮಡಿಕೇರಿ ಮುಖ್ಯರಸ್ತೆಯ ಚಾಮುಂಡೇಶ್ವರಿ ಪೆಟ್ರೋಲ್ ಬಂಕ್ ಸಮೀಪದಲ್ಲಿರುವ ಪ್ರಯಾಣಿಕರ ಬಸ್ಸು ನಿಲ್ದಾಣದಲ್ಲಿ ಮಹಿಳೆಯೊಬ್ಬರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆಕೆಯ ಬಳಿಯಿದ್ದ ಸುಮಾರು 2ಕೆಜಿ260ಗ್ರಾಂ ಗಾಂಜಾ,850 ನಗದು ಹಾಗೂ ಮೊಬೈಲ್ ಫೋನ್ ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ. ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪ ಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ, ಸೋಮವಾರಪೇಟೆ ಡಿವೈಎಸ್ಪಿ ಆರ್.ವಿ.ಗಂಗಾಧರಪ್ಪ, ಮಡಿಕೇರಿ ಗ್ರಾಮಾಂತರ ವೃತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

ವರದಿ: ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Inline Feedbacks
View all comments