ನಾಪೋಕ್ಲು ಹಳೇ ತಾಲೂಕಿನಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ

Reading Time: 2 minutes

ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸಿ; ವನಜಾಕ್ಷಿ ಸಲಹೆ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಾಪೋಕ್ಲು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಹಳೇ ತಾಲೂಕಿನ ಶ್ರೀ ಭಗವತಿ ಸಮುದಾಯ ಭವನದಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ಎಲ್ಲಾ ಸಮುದಾಯದ ಜನರ ಜೊತೆ ಅಂಗನವಾಡಿ,ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಸೇವೆ ಸಲ್ಲಿಸಬೇಕು.ಅರ್ಹ ಫಲಾನುಭವಿಗಳು ಯಾವುದೇ ಸೌಲಭ್ಯದಿಂದ ವಂಚಿತರಾಗದಂತೆ ಹಾಗೂ ಅಪೌಷ್ಠಿಕತೆ ಹೋಗಲಾಡಿಸುವಂತೆ ಕರ್ತವ್ಯ ನಿರ್ವಹಿಸಬೇಂದು ಸಲಹೆ ನೀಡಿದರು.

ಸ್ಥಳೀಯ ಆರೋಗ್ಯ ಕಾರ್ಯಕರ್ತೆ ಉಮಾ ಮಹೇಶ್ವರಿ ಮಾತನಾಡಿ ಪೌಷ್ಟಿಕತೆ ಜೊತೆಗೆ ಚುಚ್ಚು ಮದ್ದು ಸಹ ಸರಿಯಾದ ಸಮಯಕ್ಕೆ ತೆಗೆದುಕೊಳ್ಳ ಬೇಕೆಂದು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶೀಲಾ ಮಾತೃ ವಂದನಾ ಹಾಗೂ ಪೌಷ್ಠಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಹೇಮಾವತಿ ಮಾತನಾಡಿ ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ತರಕಾರಿಗಳನ್ನು ಬೆಳೆಸಿ ಅದನ್ನು ಆಹಾರದ ಜೊತೆ ಬಳಸಿದಾಗ ಅದರ ರುಚಿ ಹಾಗೂ ಪೌಷ್ಟಿಕತೆ ಹೆಚ್ಚಾಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವ ದಿನದ ವಿಶೇಷತೆ ಹಾಗೂ ಪ್ರತಿಜ್ಞಾ ವಿಧಿಯನ್ನು ಬೊದಿಸಲಾಯಿತು.ಪ್ರಥಮ್ ಸಂಸ್ಥೆಯ ಅನುಷಾ,ಸುರಬಿ ಅವರಿಂದ ಶಾಲಾ ಪೂರ್ವ ಶಿಕ್ಷಣದ ತರಬೇತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕ ಆಹಾರ ತಯಾರಿಸಿ ಪ್ರದರ್ಶಿಸಲಾಯಿತು.

ಬಲ್ಲಮಾವಟಿ ಹಾಗೂ ನಾಪೋಕ್ಲು ವೃತ್ತದ ಅಂಗನವಾಡಿ,ಆಶಾ ಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಸ್ವಾಗತಿಸಿ,ಆಶಲತಾ ನಿರೂಪಿಸಿ ವಂದಿಸಿದರು ನಿರ್ವಹಿಸಿದರು.

ವರದಿ: ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments