ಕಡಂಗ: ವಿರಾಜಪೇಟೆ ಶಾಸಕರ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಎಸ್ ಪೊನ್ನಣ್ಣ ವರು ಸೋಮವಾರ ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳಿಗೆ ಕಡಂಗ ಹಾಗೂ ಸುತ್ತಮುತ್ತಲಿನ ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡಿದರು.
ಕಡಂಗ ಮೊಹಿಯದ್ದೀನ್ ಜುಮಾ ಮಸೀದಿಗೆ ಭೇಟಿ ನೀಡಿ ಮಸೀದಿಯ ಅಹ್ವಾಲುಗಳನ್ನು ಸ್ವೀಕರಿಸಿದರು ಈ ಸಂದರ್ಭದಲ್ಲಿ ಮಸೀದಿ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು ಮಸೀದಿ ಅಧ್ಯಕ್ಷರಾದ ಅಬ್ದುಲ, ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ತದನಂತರ ಅರಪಟ್ಟು ಗ್ರಾಮದಲ್ಲಿರುವ ಶ್ರೀ ಭಗವತಿ ದೇವಸ್ಥಾನಕ್ಕೆ ಭೇಟಿ ನೀಡಿದರು ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ನೆರಪಂಡ ಚಿತ್ರ ಬೆಳಿಯಪ್ಪ ಮತ್ತು ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.
ಕಡಂಗ ಪಟ್ಟಣದಲ್ಲಿರುವ ಬದ್ರಿಯಾ ಜುಮಾ ಮಸೀದಿಗೆ ಭೇಟಿ ನೀಡಿ ಶಾಸಕರುಗಳನ್ನು ಆಡಳಿತ ಮಂಡಳಿ ವತಿಯಿಂದ ಸನ್ಮಾನಿಸಲಾಯಿತು ಈ ಸಂದರ್ಭದಲ್ಲಿ ಮಸೀದಿಯ ಅಹವಾಲುಗಳನ್ನು ಸ್ವೀಕರಿಸಿದರು ಈ ಸಂದರ್ಭ ಮಸೀದಿಯ ಅಧ್ಯಕ್ಷರಾದ ಅಬ್ದುಲ್ ರಹಮಾನ್ ಅರಫಾ, ಉಪಾಧ್ಯಕ್ಷರು ಉಸ್ಮಾನ್ ಮತ್ತು ಸದಸ್ಯರು ಉಪಸ್ಥಿತರಿದ್ದರು.
ನೂತನ ವಾಗಿ ಆಯ್ಕೆ ಯಾದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಅಧ್ಯಕ್ಷ ರನ್ನು ಮಸೀದಿ ವತಿಯಿಂದ ಸನ್ಮಾನಿಸಲಾಯಿತು
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕಾಂಗ್ರೆಸ್ ರಾಜ್ಯ ವಕ್ತಾರ ಸಂಕೇತ್ ಪೂವಯ್ಯ, ಅಲ್ಪಸಂಖ್ಯಾತ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹನೀಫಾ,
ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಹಿಲ್, ನರಿಯಂದಡ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೊಡಿರ ವಿನೋದ್ ನಾಣಯ್ಯ, ಸದಸ್ಯರಾದ ಸುಬಿರ್ ಸಿ ಇ, ಶಾಫಿ ಎಡಪಾಲ, ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಭಕ್ತರು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.
ವರದಿ: ನೌಫಲ್ ಕಡಂಗ