Reading Time: < 1 minute
ನಾಪೋಕ್ಲು : ಸ್ಥಳೀಯ ಕರ್ನಾಟಕ ಪಬ್ಲಿಕ್ ಪ್ರಾಥಮಿಕ ಶಾಲೆಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ. ಎ.ಹಾರಿಸ್, ಶಾಲೆಯ ಮುಖ್ಯಶಿಕ್ಷಕಿ ಚಂದ್ರಕಲಾ, ಶಿಕ್ಷಕಿ ಸೌಮ್ಯ, ನಳಿನಿ,ಮಾತನಾಡಿ ದಿನನಿತ್ಯ ಜೀವನದಲ್ಲಿ ಪೌಷ್ಟಿಕ ಆಹಾರ ಸೇವನೆಯಿಂದ ಮನುಷ್ಯನ ಆರೋಗ್ಯದಲ್ಲಿ ಉಂಟಾಗುವ ಉಪಯೋಗಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ವಿವಿಧ ಬಗೆಯ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳನ್ನು ಪ್ರದರ್ಶಿಸಲಾಯಿತು. ಈ ಸಂದರ್ಭ ಶಾಲೆಯ ಶಿಕ್ಷಕವೃಂದ,ಅಡುಗೆ ಸಿಬ್ಬಂಧಿಗಳು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಝಕರಿಯ ನಾಪೋಕ್ಲು