ಚೆಯ್ಯಂಡಾಣೆ ಕೇಂದ್ರ ಕೊಡವ ಸಮಾಜ ವತಿಯಿಂದ ಸಂತೋಷ ಕೂಟ

ಚೆಯ್ಯ0ಡಾಣೆ, ಸೆ 22. ಚೆಯ್ಯಂಡಾಣೆ ಕೇಂದ್ರ ಕೊಡವ ಸಮಾಜದ ವತಿಯಿಂದ ಕೈಲ್ ಮೂರ್ತ ಹಬ್ಬದ ಪ್ರಯುಕ್ತ ಸಂತೋಷಕೂಟ ಕಾರ್ಯಕ್ರಮ ತಾ.24 ಭಾನುವಾರ ಬೆಳಿಗ್ಗೆ 11 ಗಂಟೆಗೆ ಕೊಡವ ಸಮಾಜದ ಅಧ್ಯಕ್ಷ ಮುಂಡಿಯೋಳಂಡ ಬಿದ್ದಪ್ಪ ಅವರ ಅಧ್ಯಕ್ಷತೆಯಲ್ಲಿ ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ,ವಿಧಾನಪರಿಷತ್ ಸದಸ್ಯರಾದ ಮಂಡೇಪಂಡ ಸುಜಾ ಕುಶಾಲಪ್ಪ, ನಿವೃತ ಭೂಸೇನೆಯ ಕರ್ನಲ್ ನೇರಪಂಡ ಸಾಗರ್ ಚಿಣ್ಣಪ್ಪ, ಬಾಳುಗೋಡು ಕೊಡವ ಸಮಾಜದ ಮಹಿಳಾ ವಿಭಾಗದ ಅಧ್ಯಕ್ಷೆ ಬಲ್ಲಣಮಾಡ ರೀಟಾ ದೇಚಮ್ಮನವರು ಪಾಲ್ಗೊಳ್ಳಲಿದ್ದಾರೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಇದೇ ಸಂದರ್ಭ ಶಾಸಕರಿಗೆ ಮತ್ತು ವಿಧಾನಪರಿಷತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಪುರುಷರಿಗೆ,ಮಹಿಳೆಯರಿಗೆ ವಿವಿಧ ಕ್ರೀಡಾ ಕೂಟ ನಡೆಯಲಿದೆ ಎಂದು ಕೊಡವ ಸಮಾಜದ ಕಾರ್ಯದರ್ಶಿ ಮುಂಡಿಯೋಳಂಡ ಅಯ್ಯಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ

0 0 votes
Article Rating
Subscribe
Notify of
guest
0 Comments
Inline Feedbacks
View all comments