ಈದ್ ಮಿಲಾದ್ ಪ್ರಯುಕ್ತ ಎಸ್ ವೈ ಎಸ್ ನಿಂದ ಚೆರಿಯಪರಂಬು ರಸ್ತೆಯಲ್ಲಿ ಸ್ವಚ್ಛತಾ ಶ್ರಮದಾನ

Reading Time: < 1 minute

ನಾಪೋಕ್ಲು : ಕರ್ನಾಟಕ ಮುಸ್ಲಿಂ ಜಮಾಅತ್,ಎಸ್ ವೈ ಎಸ್,ಎಸ್ ಎಸ್ ಎಫ್ ಚೆರಿಯಪರಂಬು ಕಲ್ಲುಮೊಟ್ಟೆ ಶಾಖೆ ಇದರ ವತಿಯಿಂದ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ನಡೆಯಿತು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲು ಮಡಿಕೇರಿ ಮುಖ್ಯರಸ್ತೆಯಿಂದ ಚೆರಿಯಪರಂಬು ಕಲ್ಲುಮೊಟ್ಟೆ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯ ಎರಡು ಬದಿಗಳಲ್ಲಿ ಬೆಳೆದು ನಿಂತಿದ್ದ ಕಾಡುಗಳನ್ನು ಸಂಘಟನೆಯ ಕಾರ್ಯಕರ್ತರು ಯಂತ್ರೋಪಕರಣಗಳನ್ನು ಬಳಸಿ ಶ್ರಮದಾನದ ಮೂಲಕ ಸ್ವಚ್ಛಗೊಳಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

ಸ್ವಚ್ಛತಾ ಕಾರ್ಯದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಕೆ. ಎ. ಮಾಹಿನ್,ಎಸ್ ಎಸ್ ಎಫ್ ಕಾರ್ಯದರ್ಶಿ ಸಿ. ಎಂ. ಉಸ್ಮಾನ್, ಎಸ್ ವೈ ಎಸ್ ಅಧ್ಯಕ್ಷ ಮಹಮ್ಮದ್,ದಹವಾ ಕಾರ್ಯದರ್ಶಿ ಇಬ್ರಾಹಿಂ, ಸದಸ್ಯರಾದ ಅನೀಫ್, ಶಂಶುದ್ದೀನ್, ನಜುಮುದ್ದೀನ್ ಮತ್ತಿತರರು ಪಾಲ್ಗೊಂಡಿದ್ದರು.

ವರದಿ: ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments