ನಾಪೋಕ್ಲುವಿನಲ್ಲಿ ಜಿಲ್ಲಾಮಟ್ಟದ ಜನತಾದರ್ಶನ ಕಾರ್ಯಕ್ರಮಕ್ಕೆ ಚಾಲನೆ

Reading Time: 4 minutes

ನಾಪೋಕ್ಲು : ರಾಜ್ಯದ ಜನರ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್ ಭೋಸರಾಜು ಹೇಳಿದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲು ಸಮೀಪದ ಚೆರಿಯಪರಂಬು ಶಾದಿ ಮಹಲ್ ಸಭಾಂಗಣದಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರ ಸಮಸ್ಯೆಯನ್ನು ಆಲಿಸುವ ಪರಿಹರಿಸುವ ಹಾಗೂ ಸರ್ಕಾರದ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ರಾಜ್ಯದ ಮುಖ್ಯಮಂತ್ರಿ ಅವರ ಆದೇಶದಂತೆ ಇಡೀ ರಾಜ್ಯಾದ್ಯಂತ ಸಚಿವರು, ಶಾಸಕರು, ಸರ್ಕಾರದ ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಜನತಾದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಂದು ಇದನ್ನು ಕೊಡಗು ಜಿಲ್ಲೆಯಲ್ಲಿ ಮೊದಲ ಬಾರಿಗೆ ಚಾಲನೆ ನೀಡಲಾಗಿದೆ ಎಂದರು.

ಸಾಮಾನ್ಯ ಜನರ ಸಾರ್ವಜನಿಕರ ಅರ್ಜಿಗಳನ್ನು ಈ ಸಂದರ್ಭದಲ್ಲಿ ಸ್ವೀಕರಿಸಲಾಗುತ್ತಿದ್ದು ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಇಲಾಖಾವಾರು ಪ್ರತ್ಯೇಕಿಸಿ ನೀಡಲಾಗುವುದು. ರಾಜ್ಯ ಮಟ್ಟದ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳಾಗಿದ್ದರೆ ರಾಜ್ಯ ಕಾರ್ಯದರ್ಶಿಯ ಮೂಲಕ ಸರ್ಕಾರಕ್ಕೆ ತಲುಪಿಸಿ ಅದಕ್ಕೆ ಸೂಕ್ತ ಪರಿಹಾರ ನೀಡಲಾಗುವುದು ಎಂದರು. ಸರ್ಕಾರದ 5 ಗ್ಯಾರಂಟಿಗಳಲ್ಲಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಕೊಡಗು ಜಿಲ್ಲೆಯ 55 ಲಕ್ಷ ಮಹಿಳೆಯರು ಉಚಿತವಾಗಿ ರಾಜ್ಯದಲ್ಲೆಡೆ ಸರ್ಕಾರಿ ಬಸ್ಗಳಲ್ಲಿ ಸಂಚರಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗೃಹಜೋತಿಯಲ್ಲಿ ಕೊಡಗು ಜಿಲ್ಲೆಯ ಗ್ರಾಹಕರ 6.65 ಕೋಟಿ ರೂಗಳನ್ನು ಸರ್ಕಾರ ಬರಿಸುತ್ತಿದೆ. ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಲ್ಲಿ 2,ಸಾವಿರ ರೂ ಗಳನ್ನು ನೀಡುತ್ತಿದ್ದು1,14,420 ರೂಗಳನ್ನು ನೀಡಲಾಗಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ 1.14 ಲಕ್ಷ ಜನರಿಗೆ ಅಕ್ಕಿ ವಿತರಿಸಲಾಗುತ್ತಿದೆ. ಈ ಯೋಜನೆಗಳು ಶೇ. 100ರಷ್ಟು ಪಾರದರ್ಶಕವಾಗಿದ್ದು ಒಂದು ರೂಪಾಯಿ ಕೂಡ ಲಂಚ ನೀಡಲಾಗಿಲ್ಲ. ಈ ಬಗ್ಗೆ ದೂರಿದ್ದರೆ ಜನತಾದರ್ಶನದಲ್ಲಿ ದೂರು ನೀಡಬೇಕು ಎಂದರು.
ಜಿಲ್ಲೆಯ ವಿವಿಧ ಇಲಾಖೆಗಳ ಬಗ್ಗೆ ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಸಮಸ್ಯೆಗಳಿದ್ದರೆ ದೂರು ನೀಡಬಹುದು. ಎಲ್ಲರ ಸಹಕಾರದಿಂದ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಲಾಗಿದೆ. ಪ್ರತಿ ತಿಂಗಳು ಜಿಲ್ಲೆಯ ಒಂದೊಂದು ತಾಲೂಕುಗಳಲ್ಲಿ ಈ ಕಾರ್ಯಕ್ರಮವನ್ನು ನಡೆಸಲಾಗುವುದು. ಸಾಮಾನ್ಯ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳನ್ನು ಆಲಿಸಿ, ಅದಕ್ಕೆ ಪರಿಹಾರ ಕಂಡುಕೊಳ್ಳುವುದು ನಮ್ಮ ಈ ಸರ್ಕಾರದ ಉದ್ದೇಶವಾಗಿದೆ. ಕಾವೇರಿ ನದಿ ತೀರದಲ್ಲಿ ತ್ಯಾಜ್ಯ ಹಾಕುತ್ತಿರುವ ಸಮಸ್ಯೆ ಗಂಭೀರವಾಗಿದೆ. ಇದಕ್ಕೆ ಪರಿಹಾರ ನೀಡುವ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟರಾಜ,ಹಾಗೂ ಸರ್ಕಾರದ ಕಾರ್ಯದರ್ಶಿ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ವತಿಯಿಂದ ವಸ್ತುಪ್ರದರ್ಶನ ಹಾಗೂ ಫಲಾನುಭವಳಿ ಪ್ರಮಾಣ ಪತ್ರ, ಸಹಾಯ ಧನ,ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವರ್ಣಿತ್ ನೇಗಿ,ಅಪರ ಜಿಲ್ಲಾಧಿಕಾರಿ ವೀಣಾ,ಜಿಲ್ಲಾ ಉಪವಿಭಾಧಿಕಾರಿ ಯತೀಶ್ ಉಲ್ಲಾಳ್, ನಾಪೋಕ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವೀರಭದ್ರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು,ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಸದಸ್ಯರು,ಸಾರ್ವಜನಿಕರು ಪಾಲ್ಗೊಂಡಿದ್ದರು.

ವರದಿ: ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments