Reading Time: 2 minutes
ಚೆಯ್ಯ0ಡಾಣೆ, ಸೆ 26. ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ,ಕೊಡಗು ಜಿಲ್ಲಾ ಪಂಚಾಯಿತಿ,ತಾಲೂಕು ಪಂಚಾಯಿತಿ
ಮಡಿಕೇರಿಯ ಇದರ ವತಿಯಿಂದ ಸ್ವಚ್ಛತೆಯ ಸೇವೆ ಎಂಬ ತ್ಯಾಜ್ಯ ಮುಕ್ತ ಭಾರತ ಅಭಿಯಾನ ಜಾಥಾ ಕಾರ್ಯಕ್ರಮದ ನಡೆಯಿತು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ನರಿಯಂದಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪೆಮ್ಮಂಡ ಕೌಶಿ ಕಾವೇರಮ್ಮ ಜಾಥಾಕ್ಕೆ ಚಾಲನೆ ನೀಡಿದರು. ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಬಿದ್ದಪ್ಪ ಸ್ವಚ್ಛತೆಯ ಬಗ್ಗೆ ಪ್ರತಿಜ್ಞಾ ವಿಧಿ ಬೋದಿಸಿದರು. ಇದೆ ಸಂದರ್ಭ ಸಂಜೀವಿನಿ ಒಕ್ಕೂಟದ ಸದಸ್ಯರು ಒಕ್ಕೂಟಕ್ಕೆ ಸೇರ್ಪಡೆ ಗೊಳಿಸುವ ಘೋಷಣೆ,ಸಾಮಾಜಿಕ ಕ್ರೋಡಿಕರಣ ಜಾಥಾ ನಡೆಸಿದರು. ಈ ಸಂದರ್ಭ ಅಭಿವೃದ್ಧಿ ಅಧಿಕಾರಿ ಆಶಾ ಕುಮಾರಿ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿನೋದ್ ನಾಣಯ್ಯ, ನಿಕಟಪೂರ್ವ ಅಧ್ಯಕ್ಷ ರಾಜೇಶ್ ಅಚ್ಚಯ್ಯ,ಗ್ರಾಮ ಪಂಚಾಯಿತಿ ಸದಸ್ಯರು, ಎಂಬಿಕೆ ವಸಂತಿ,ನಳಿನಿ, ಅಂಬಿಕಾ ಸಂಜೀವಿನಿ ಒಕ್ಕೂಟದ ಸದಸ್ಯೆಯರು ಉಪಸ್ಥಿತರಿದ್ದರು.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ