ನಾಪೋಕ್ಲು : ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ನಾಪೋಕ್ಲುವಿನ ವಿವಿಧೆಡೆ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.
ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ.ಎ.ಹಾರಿಸ್ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ದಿನದ ಮಹತ್ವದ ಕುರಿತು ಮಾತನಾಡಿದರು.
ಈ ಸಂದರ್ಭ ಶಾಲೆಯ ಪ್ರಭಾರ ಪ್ರಾಂಶುಪಾಲರಾದ ವಿಜಿತಾ, ಪ್ರಭಾರ ಉಪಪ್ರಾಂಶುಪಾಲರಾದ ಶಿವಣ್ಣ, ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಾಲೆಯ ಶಿಕ್ಷಕ ವೃಂದ,ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಅದರಂತೆ ನಾಪೋಕ್ಲು ಗ್ರಾಮ ಪಂಚಾಯಿತಿ, ನಾಡಕಛೇರಿ, ಸಮುದಾಯ ಅರೋಗ್ಯ ಕೇಂದ್ರ ಸೇರಿದಂದೆ ವ್ಯಾಪ್ತಿಯ ಸರ್ಕಾರಿ ಕಚೇರಿ, ಅಂಗನವಾಡಿ ಕೇಂದ್ರ, ಸರ್ಕಾರಿ ಶಾಲೆ,ಆಂಗ್ಲಮಾಧ್ಯಮ ಶಾಲೆಗಳಲ್ಲಿ ಮಹಾತ್ಮಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನವನ್ನು ಆಚರಿಸಲಾಯಿತು.ಕೆಲವೆಡೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು.
ವರದಿ: ಝಕರಿಯ ನಾಪೋಕ್ಲು