Reading Time: < 1 minute
ಮಡಿಕೇರಿ ಅ.4: ಮರಗೋಡು ವಿವಿದೊದ್ದೇಶ ಪ್ರಾಥಮಿಕ ಕ್ರಷಿ ಗ್ರಾಮೀಣ ಸಹಕಾರ ಸಂಘಕ್ಕೆ ಅಧ್ಯಕ್ಷರು ಮತ್ತು ಮತ್ತು ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಕಾರ್ಯ ನಡೆಯಿತು.
ದಿನಾಂಕ 24/9/23 ರಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಬೆಂಬಲಿತ ಅಭ್ಯರ್ಥಿಗಳು 13 ಸ್ಥಾನಕ್ಕೆ 13 ಸ್ಥಾನವನ್ನು ಸಹ ಪಡೆದಿದ್ದು, ಅದೇ ದಿನ ಗ್ರಾಮದಲ್ಲಿ ವಿಜಯೋತ್ಸವ ಆಚರಿಸಿದ್ದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಈ ಸಂಬಂಧ 4/10/23(ಇಂದು) ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ನಡೆದಿದ್ದು,2 ನೇ ಬಾರಿಗೆ ಅಧ್ಯಕ್ಷರಾಗಿ ಕಾಂಗೀರ ಸತೀಶ್ (ಅಶ್ವಿ) ಅವರು ಅವಿರೋಧವಾಗಿ ಆಯ್ಕೆಯಾದರೆ, ಅಚ್ಚಕಾಳೀರ ಕಾವೇರಪ್ಪ ರವರು 2 ನೇ ಬಾರಿಗೆ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವರದಿ: ಪ್ರತೀಕ್ , ಮರಗೋಡು