Reading Time: < 1 minute
ನಾಪೋಕ್ಲು : ಜಿಲ್ಲಾಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂ.ಬಿ.ರಿಯಾಶರಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಶನಿವಾರ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿದ್ಯಾರ್ಥಿಯನ್ನು ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.
ವರದಿ: ಝಕರಿಯ ನಾಪೋಕ್ಲು