ನೆಲಜಿಯಲ್ಲಿ ಜಿಲ್ಲಾ ಮಟ್ಟದ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ

Reading Time: 2 minutes

ಸ್ಪರ್ಧೆಯಲ್ಲಿ ಕೋವಿಯನ್ನು ಎಚ್ಚರಿಕೆ ಮತ್ತು ಜವಾಬ್ದಾರಿಯು ತವಾಗಿ ಬಳಸಿ -ಮೇಜರ್ ಬಾಳೆಯಡ ಅಪ್ಪಣ್ಣ ಸಲಹೆ

ನಾಪೋಕ್ಲು: ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಕೋವಿಯನ್ನು ಎಚ್ಚರಿಕೆ ಮತ್ತು ಜವಾಬ್ದಾರಿಯುತವಾಗಿ ಬಳಸುವುದರ ಮೂಲಕ ಭಾಗವಹಿಸುವುದು ಮುಖ್ಯ ಎಂದು ನಿವೃತ್ತ ಸುಬೇದಾರ್ ಮೇಜರ್ ಬಾಳೆಯಡ ಅಪ್ಪಣ್ಣ ಹೇಳಿದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲು ಸಮೀಪದ ನೆಲಜಿ ಗ್ರಾಮದ ಅಂಬಲ ಶಾಲಾ ಮೈದಾನದಲ್ಲಿ ಅಂಬಲ ಮಹಿಳಾ ಸಮಾಜದ ವತಿಯಿಂದ ಭಾನುವಾರ ಆಯೋಜಿಸಲಾಗಿದ್ದ ಮೂರನೇ ವರ್ಷದ ಜಿಲ್ಲಾ ಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೋವಿ ಪೂಜೆ ನೆರವೇರಿಸಿ ಮಾತನಾಡಿದರು.

ಬಳಿಕ ತೆಂಗಿನಕಾಯಿಗೆ ಗುಂಡು ಹೊಡೆದು ಸ್ಪರ್ಧೆಗೆ ಚಾಲನೆ ನೀಡಿದ ಅವರು ಸೇನೆಯಲ್ಲಿ ಶೂಟಿಂಗ್ ಸಂದರ್ಭ ಕಠಿಣ ಮುಂಜಾಗ್ರತಾ ಕ್ರಮಗಳನ್ನು ವಹಿಸುತ್ತಾರೆ. ಆದರೆ ಇಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ಕೋವಿಯನ್ನು ಎಚ್ಚರಿಕೆಯಿಂದ ಬಳಸಬೇಕು.ಮಹಿಳಾ ಸಮಾಜದ ಸದಸ್ಯರು ಅತ್ಯುತ್ತಮ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಂಬಲ ಮಹಿಳಾ ಸಮಾಜ ಅಧ್ಯಕ್ಷ ಅಪ್ಪುಮಣಿಯಂಡ ಡೇಸಿ ಸೋಮಣ್ಣ ವಹಿಸಿದ್ದರು.ಸಭಾ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳು ಉದ್ಘಾಟಿಸಿ ಚಾಲನೆ ನೀಡಿದರು.ಕಾಫಿ ಬೆಳೆಗಾರ ಎಳ್ತಂಡ ಬೋಪಣ್ಣ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ. ನಾಣಯ್ಯ,ದಿ ತಾಮರ ರೆಸಾರ್ಟಿನ ವ್ಯವಸ್ಥಾಪಕ ಕಲ್ಯಾಟಂಡ ಗಿರೀಶ್ ಸುಬ್ಬಯ್ಯ, ಕಾಫಿ ಬೆಳೆಗಾರ ಕೋಟೆರ ಸುರೇಶ್, ಮಾಜಿ ಸೈನಿಕ ಮಣವಟ್ಟಿರ ಸಾಬು ಉತ್ತಪ್ಪ, ಅಂಬಲ ಮಹಿಳಾ ಸಮಾಜದ ಸಲಹಾ ಸಮಿತಿಯ ಅಧ್ಯಕ್ಷೆ ಮಣವಟ್ಟಿರ ಕಮಲ ಬೆಳ್ಯಪ್ಪ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಾಪೋಕ್ಲು ಕೊಡವ ಸಮಾಜದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮುಂಡಂಡ ಸಿ. ನಾಣಯ್ಯ,ನಿರ್ದೇಶಕಿ ಝಾನ್ಸಿ ಮಂದಪ್ಪ, ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ ಅರುಣ್ ಬೇಬ ಅವರನ್ನು ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಾರ್ಥಿಗಳು ಪಾಲ್ಗೊಂಡಿದ್ದರು.

ವರದಿ: ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments