Reading Time: < 1 minute
ನಾಪೋಕ್ಲು : ನಾಪೋಕ್ಲು ವ್ಯಾಪ್ತಿಯಲ್ಲಿ ಮುಂಬರುವ ದಿನಗಳಲ್ಲಿ ಅಹಿತಕರ ಘಟನೆಗಳು ಸಂಭವಿಸಿದಂತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಾಪೋಕ್ಲುವಿನಲ್ಲಿ ಸೋಮವಾರ ಪಥಸಂಚಲನ ನಡೆಯಿತು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯ ಬೀದಿಗಳಲ್ಲಿ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪಡೆ ಮತ್ತು ಪೊಲೀಸರು ಪಥಸಂಚಲನ ನಡೆಸುವ ಮೂಲಕ ನಾಗರಿಕರಿಗೆ ಜಾಗೃತಿ ಮೂಡಿಸುವುದರ ಜೊತೆಗೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಿಲ್ಲ ಎಂಬ ಸಂದೇಶವನ್ನು ರವಾನಿಸಿದರು.
ಈ ಸಂದರ್ಭ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಥಸಂಚಲನದಲ್ಲಿ ಪಾಲ್ಗೊಂಡಿದ್ದರು.
ನಾಪೋಕ್ಲು: ಝಕರಿಯ ನಾಪೋಕ್ಲು