Reading Time: < 1 minute
ಸ್ಥಳೀಯ ಕಕ್ಕಬೆ ಅಂಗನವಾಡಿ ಕೇಂದ್ರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ “ಸ್ವಚ್ಛ ಕೈಗಳು ಸುಸ್ಥಿರ ಅಭಿವೃದ್ಧಿ ಕೀಲಿ” ಎಂಬ ಘೋಷವಾಕ್ಯದಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆಯನ್ನು ಕಕ್ಕಬೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಚರಿಸಲಾಯಿತು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಕಾರ್ಯಕ್ರಮದ ಉಸ್ತುವಾರಿಯನ್ನು ಮಹಿಳೆ ಮತ್ತು ಮಕ್ಕಳ ಮಹಿಳಾ ಅಭಿವೃದ್ದಿ ಇಲಾಖೆಯ ಅಧಿಕಾರಿ ಶೀಲಾ ವಹಿಸಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆ ಭಾಗ್ಯವತಿ ಸ್ವಚ್ಛತೆ ಮತ್ತು ಕೈ ತೊಳೆಯುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿತ ವಿಧಾನದ ಮೂಲಕ ಮಾಹಿತಿ ನೀಡಿದರು.
ಈ ಸಂದರ್ಭ ಸ್ಥಳೀಯ ಕಕ್ಕಬೆ ಕುಂಜಿಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಿಲ್ಪ,ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಅಶೋಕ್,ಶಾಲಾ ವಿದ್ಯಾರ್ಥಿಗಳು,ಅಂಗನವಾಡಿ ವಿದ್ಯಾರ್ಥಿಗಳು, ಆಶಾ,ಅಂಗನವಾಡಿ ಕಾರ್ಯಕರ್ತೆಯರು ಮತಿತ್ತರರು ಉಪಸ್ಥಿತರಿದ್ದರು.
ವರದಿ: ಸಿ.ಎ. ಅಶ್ರಫ್, ಚೆಯ್ಯಂಡಾಣೆ