ನಾಪೋಕ್ಲು : ಪ್ರತಿಯೊಬ್ಬರು ಸ್ವಚ್ಛತೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು ಮನೆಯಿಂದಲೇ ಮಕ್ಕಳಿಗೆ ಕೈ ತೊಳೆಯುವ ಬಗ್ಗೆ ಅರಿವು ಮೂಡಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಶೀಲಾ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಾಪೋಕ್ಲು ಗ್ರಾಮ ಪಂಚಾಯಿತಿ, ಹಳೆ ತಾಲೂಕು ಅಂಗನವಾಡಿ ಕೇಂದ್ರದ ಸಹಯೋಗದೊಂದಿಗೆ “ಸ್ವಚ್ಛತೆಗಳು ಸುಸ್ಥಿರ ಅಭಿವೃದ್ಧಿ ಕೀಲಿ” ಎಂಬ ಘೋಷವಾಕ್ಯದಲ್ಲಿ ಹಳೇ ತಾಲೂಕು ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾದ ವಿಶ್ವ ಕೈ ತೊಳೆಯುವ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಆರೋಗ್ಯವೇ ಭಾಗ್ಯ ಎಂಬಂತೆ ಎಲ್ಲರೂ ಜೇವನದಲ್ಲಿ ವೈಯಕ್ತಿಕ ಸ್ವಚ್ಛತೆ ಮತ್ತು ಪರಿಸರ ಸ್ವಚ್ಛತೆ ಕಾಪಾಡಿಕೊಂಡು ಇತರರಿಗೆ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ, ಸದಸ್ಯರಾದ ಟಿ. ಎ. ಮಹಮ್ಮದ್, ಹಳೇ ತಾಲೂಕು ಅಂಗನವಾಡಿ ಕೇಂದ್ರದ ಶಿಕ್ಷಕಿ ಭಾಗ್ಯವತಿ, ಆರೋಗ್ಯ ಇಲಾಖೆಯ ಸಿಬ್ಬಂದಿ ಉಮಾಮಹೇಶ್ವರಿ, ಆಶಾಕಾರ್ಯಕರ್ತೆ ರಮ್ಯ, ಸ್ತ್ರೀ ಶಕ್ತಿ ಗುಂಪಿನ ಸದಸ್ಯರು,ಅಂಗನವಾಡಿ ಮಕ್ಕಳು, ಪೋಷಕರು, ಮತಿತ್ತರರು ಉಪಸ್ಥಿತರಿದ್ದರು.
ವರದಿ: ಝಕರಿಯ ನಾಪೋಕ್ಲು