ಮೂರ್ನಾಡು: ಮೂರ್ನಾಡು ವಿದ್ಯಾಸಂಸ್ಥೆಯಲ್ಲಿ 68ನೇ ಕನ್ನಡ ರಾಜ್ಯೋತ್ಸವ ಮತ್ತು ನೂತನ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟನಾ ಸಮಾರಂಭವು ದಿನಾಂಕ 4ರಂದು ಶನಿವಾರ ನಡೆಯಲಿದೆ.
ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಪೂರ್ವಾಹ್ನ 10.00 ಗಂಟೆಗೆ ಆಯೋಜಿಸಲಾಗಿರುವ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಪ್ರಾಥಮಿಕ ಶಾಲಾ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ಮಡಿಕೇರಿಯ ಸರಕಾರಿ ಮಹಿಳಾ ಪದವಿ ಕಾಲೇಜಿನ ಪ್ರಾಧ್ಯಾಪಕಿ ಡಾ. ಕೋರನ ಸರಸ್ವತಿ ಪ್ರಕಾಶ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಎನ್.ಸಿ. ನವೀನ್ ಬಿ.ಕಾಂ. ವಿದ್ಯಾರ್ಥಿಗಳಿಗೆ ಬರೆದ ಹಣಕಾಸು ನಿರ್ವಹಣೆಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ನಡೆಯಲಿದೆ.
ವರದಿ: ಟಿ.ಸಿ. ನಾಗರಾಜ್, ಮೂರ್ನಾಡು