ನಾಪೋಕ್ಲು : ನಾಪೋಕ್ಲು ಪಟ್ಟಣದಿಂದ ಹಳೇ ತಾಲೂಕು ಹೋಗುವ ಮುಖ್ಯ ರಸ್ತೆಯ ಶ್ರೀ ಪೊನ್ನು ಮುತ್ತಪ್ಪ ದೇವಾಲಯದ ಬಳಿಯ ರಸ್ತೆ ಮಧ್ಯದಲ್ಲಿ ಭಾರಿ ಪ್ರಮಾಣದ ಗುಂಡಿಯೊಂದು ಗೋಚರಿಸಿದ್ದು ಅಪಘಾತಕ್ಕೆ ಆಹ್ವಾನ ನೀಡುವಂತೆ ಎದ್ದು ಕಾಣುತ್ತಿದೆ. ಕೂಡಲೇ ದುರಸ್ತಿಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ನಾಪೋಕ್ಲುವಿನಿಂದ ವಿರಾಜಪೇಟೆ- ಭಾಗಮಂಡಲ ತೆರಳುವ ಮುಖ್ಯ ರಸ್ತೆಇದಾಗಿದ್ದು ಪ್ರತಿ ದಿನ ಹಗಲಿರಳು ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿವೆ. ಕಳೆದ ಎರಡು ದಿನಗಳ ಹಿಂದೆ ಈ ರಸ್ತೆ ಗುಂಡಿಯಲ್ಲಿ ದ್ವಿಚಕ್ರ ವಾಹನ ಸವಾರರು ಬಿದ್ದು ಆಸ್ಪತ್ರೆ ಸೇರಿರುವ ಘಟನೆ ಕೂಡ ನಡೆದಿದೆ. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಕೂಡಲೇ ರಸ್ತೆಯಲ್ಲಿರುವ ಗುಂಡಿಯನ್ನು ಮುಚ್ಚಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಬೇಕೆಂದು ನಾಪೋಕ್ಲುವಿನ ವಾಹನ ಚಾಲಕರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.ಇಲ್ಲದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಇಲಾಖೆಯವರೇ ನೇರ ಹೊಣೆ ಹೊರ ಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.