ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹ: ನೂತನ ಗೋದಾಮು ಮತ್ತು ಸಭಾಂಗಣ ಕಟ್ಟಡ ಉದ್ಘಾಟನೆ

Reading Time: 3 minutes

ಹೊದ್ದೂರು: ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ 70ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಸಹಕಾರ ಭಾರತಿ ರಾಜ್ಯ ಉಪಾಧ್ಯಕ್ಷ ನಂದಿನೆರವಂಡ ರವಿ ಬಸಪ್ಪ ಸಹಕಾರ ಧ್ವಜಾರೋಹಣ ನೆರವೇರಿಸಿದರು. ನೂತನ ಗೋದಾಮು ಮತ್ತು ಸಭಾಂಗಣ ಕಟ್ಟಡವನ್ನು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಮನು ಮುತ್ತಪ್ಪ ಅವರು, ಕೇಂದ್ರ ಸರ್ಕಾರದ ಹಲವಾರು ಉಪಯುಕ್ತ ಯೋಜನೆಗಳಿಂದ ರಾಜ್ಯದೆಲ್ಲೆಡೆ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಸೂಕ್ತ ಸೇವೆಯನ್ನು ಸಲ್ಲಿಸುತ್ತಿವೆ. ಆರ್ಥಿಕ ಸಂಪತ್ತು ದ್ವಿಗುಣಗೊಳ್ಳುವುದರ ಮೂಲಕ ಭಾರತ ಏಷ್ಯಾ ಖಂಡದಲ್ಲಿಯೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ. ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ವಿತರಿಸಲಾಗುತ್ತಿದೆ. ಕಟ್ಟಡ ನಿಮಾಣ, ಗೋದಾಮು, ಗೊಬ್ಬರಕ್ಕೆ ಸಬ್ಸಿಡಿಯನ್ನು ನೀಡಲಾಗುತ್ತಿದೆ. ಆ ಮೂಲಕ ಕೃಷಿಕ ವರ್ಗದ ಅಭ್ಯುದಯಕ್ಕೆ ಸಹಕಾರಿಯಾಗಿದೆ. ಆರ್ಥಿಕ ತಜ್ಞರ ಅಭಿಪ್ರಾಯದಂತೆ ಭಾರತ ಆರ್ಥಿಕ ಬೆಳವಣಿಗೆಯಲ್ಲಿ 2028ಕ್ಕೆ ಏಷ್ಯಾ ಖಂಡದಲ್ಲಿಯೇ 3ನೇ ಸ್ಥಾನವನ್ನು ಪಡೆಯಲಿದೆ, ಈ ಹಂತದಲ್ಲಿ ಸಹಕಾರಿ ಕ್ಷೇತ್ರದಲ್ಲಿ ಭಾರೀ ಬದಲಾವಣೆಯಾಗಲಿದೆ ಎಂದು ತಿಳಿಸಿದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಏಷ್ಯದಲ್ಲಿಯೇ ಪ್ರಥಮ ಬಾರಿಗೆ 1905ರಲ್ಲಿ ಕರ್ನಾಟಕ ರಾಜ್ಯದ ಗದಗದಲ್ಲಿ ರೈತ ಸಣ್ಣ ರಾಮನಗೌಡ ಪಾಟೀಲರ ಕನಸಿನ ಕೂಸಾದ ಸಹಕಾರ ಸಂಸ್ಥೆ ಆರಂಭಗೊಂಡು ಇದೀಗ ರಾಜ್ಯದಲ್ಲೆಡೆ ಮಾದರಿ ಸಂಸ್ಥೆಯಾಗಿ ರೂಪುಗೊಂಡಿದೆ. ಕೇಂದ್ರ ಸರ್ಕಾರ ರೈತರ ಅನುಕೂಲಕ್ಕಾಗಿ ಪೆಟ್ರೋಲ್ ಬಂಕ್, ಪೆಟ್ರೋಲ್ ರಹಿತ ಚಾರ್ಜರ್ ಬಂಕನ್ನು ನಿರ್ಮಿಸಲು ಕೂಡ ಸಹಾಯಧನ ನೀಡಲಿದ್ದು, ರೈತಾಪಿ ವರ್ಗದ ಸಂಸ್ಥೆಗಳು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇಪ್ ಲಾಕರನ್ನು  ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಉದ್ಘಾಟಿಸಿದರು. ನೂತನ ಸಭಾಂಗಣವನ್ನು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ನಿರ್ದೇಶಕ ಕನ್ನಂಡ ಸಂಪತ್ ಉದ್ಘಾಟಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನೆರವಂಡ ಸಂಜಯ್ ಪೂಣಚ್ಚ, ಗ್ರಾಮದ ರೈತರ ಸಹಕಾರ ಇಂದು ಸಹಕಾರಿ ಸಂಸ್ಥೆಯ ಬೆಳವಣಿಗೆಗೆ ಸಹಕಾರಿಯಾಗಿದೆ. ಸಂಸ್ಥೆಯಲ್ಲಿ ದೊರಕುವ ಎಲ್ಲಾ ಸೌಲಭ್ಯಗಳನ್ನು ಮುಕ್ತವಾಗಿ ಪಡೆದು ಆರ್ಥಿಕ ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ಕೊಡಗು ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ಕೊಡಪಾಲು ಎಸ್.ಗಣಪತಿ, ಜಿಲ್ಲಾ ಸಹಕಾರಿ ರತ್ನ ಪ್ರಶಸ್ತಿ ವಿಜೇತರು, ರಾಜ್ಯ ಸಹಕಾರ ಹಾಪ್‍ಕಾಮ್ಸ್ ನಿರ್ದೇಶಕ ಬಿದ್ದಾಟಂಡ ಎ.ಚಂಗಪ್ಪ, ಕಡಂಗ ಕೃಷಿ ಪತ್ತಿನ ಅಧ್ಯಕ್ಷ ಕೋಡಿರ ಪ್ರಸನ್ನ ತಮ್ಮಯ್ಯ, ಕೊಡಗು ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ಎಂ.ಎಸ್.ಕೃಷ್ಣ ಪ್ರಸಾದ್, ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಕೂಡಂಡ ಎಂ.ಸೋಮಣ್ಣ ಉಪಸ್ಥಿತರಿದ್ದರು.

ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ವಾಂಚೀರ ರನ್ನ ಅಜಯ್‍ಕುಮಾರ್ ಸ್ವಾಗತಿಸಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಪ್ರಾರ್ಥಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
1 1 vote
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments