ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ವತಿಯಿಂದ ಎರಡನೇ ವರ್ಷದ ರಾಜ್ಯಮಟ್ಟದ ಕೊಡವ ವಾಲಗತ್ತಾಟ್ ನಮ್ಮೆಯನ್ನು ಅಮ್ಮತಿ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಅಮ್ಮತಿ ಕೊಡವ ಸಮಾಜದ ಸಹಕಾರದಲ್ಲಿ ನಮ್ಮ ಸಂಸ್ಥೆಯಿಂದ ಎರಡನೇ ವರ್ಷದ ಕೊಡವ ವಾಲತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು ಸ್ಪರ್ಧಿಗಳು ಡಿಸೆಂಬರ್ 2ನೇ ತಾರೀಖಿನ ಒಳಗೆ ತಮ್ಮ ಹೆಸರನ್ನು ವಿರಾಜಪೇಟೆಯ ಮೂರ್ನಾಡು ರಸ್ತೆಯಲ್ಲಿರುವ ತೂಕ್ ಬೊಳಕ್ ಕೊಡವ ವಾರ ಪತ್ರಿಕೆಯ ಕಛೇರಿಯಲ್ಲಿ ಅಥವಾ ಫೋನ್ ಮೂಲಕ ನೋಂದಾಯಿಸಲು ಕೋರಿದ್ದಾರೆ.
ಡಿಸೆಂಬರ್ 12ರಂದು ಅಮ್ಮತ್ತಿ ಕೊಡವ ಸಮಾಜದ ಅವರಣದಲ್ಲಿ ಕೊಡವ ವಾಲಗತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು ಪುರುಷರು ಹಾಗೂ ಮಹಿಳೆಯರು ಎಂದು ಬೇರೆ ಬೇರೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ತಲಾ ಐದು ವಿಭಾಗದಲ್ಲಿ ಸ್ಪರ್ಧೆ ನಡೆಯಲ್ಲಿದ್ದು, ಪ್ರಾಥಮಿಕ ವಿಭಾಗ ಎಂದು ಒಂದರಿಂದ 7ನೇ ತರಗತಿಯವರೆಗೆ, 8ನೇ ತರಗತಿಯಿಂದ 10ನೇ ತರಗತಿಯವರೆಗೆ ಹೈಸ್ಕೂಲ್ ವಿಭಾಗ, ಒಂದನೇ ಪಿಯುಸಿಯಿಂದ 3ನೇ ಪದವಿಯವರೆಗೆ ಕಾಲೇಜು ವಿಭಾಗ, ಕಾಲೇಜಿನ ನಂತರ 60 ವಯಸ್ಸಿನವರೆಗೆ ಮತ್ತೊಂದು ವಿಭಾಗ, 60 ವಯಸ್ಸಿನ ಮೇಲ್ಪಟ್ಟು ಹಿರಿಯ ನಾಗರಿಕರ ವಿಭಾಗ ಹೀಗೆ ಐದು ವಿಭಾಗಗಳಲ್ಲಿ ಪುರುಷರು ಮಹಿಳೆಯರು ಎಂದು ತಲಾ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಮಧೋಶ್ ಪೂವಯ್ಯ ತಿಳಿಸಿದ್ದಾರೆ.
ಕಳೆದ ವರ್ಷ ಮೊದಲ ಬಾರಿಗೆ ವಿರಾಜಪೇಟೆ ಕೊಡವ ಸಮಾಜದಲ್ಲಿ ಯಶಸ್ವಿ ಕೊಡವ ವಾಲಗತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು ಜನಮನ್ನಣೆ ಪಡೆದಿತ್ತು, ಈ ಬಾರಿ ಅಮ್ಮತ್ತಿ ಕೊಡವ ಸಮಾಜದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧಿಗಳು ಮಾತ್ರವಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದ್ದು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆಸಕ್ತರ ಡಿಸೆಂಬರ್ 2ನೇ ತಾರೀಖಿನ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಣಿಗಾಗಿ 9480556667 ಅಥವಾ 9483815478 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದ್ದಾರೆ.