ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ಶ್ರೀ ಎಂ.ಜೆ ದಿನೇಶ್ ಅವರಿಂದ ಚಾಲನೆ
ಭಾರತ ಸರ್ಕಾರದ ವಿವಿಧ ಇಲಾಖೆಗಳ ವತಿಯಿಂದ ಚಿಕ್ಕಮಗಳೂರಿನ ಕಾಫಿ ಮಂಡಳಿ ಆವರಣದಲ್ಲಿ ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆಗಳನ್ನು ಪ್ರಚಾರ ಪಡಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಭಾರತೀಯ ಕಾಫಿ ಮಂಡಳಿ ಅಧ್ಯಕ್ಷರಾದ ಶ್ರೀ ಎಂ.ಜೆ ದಿನೇಶ್ ಅವರು ಚಾಲನೆ ನೀಡಿದ್ದರು.
ಯೋಜನೆಗಳನ್ನು ಪ್ರಚಾರ ಪಡಿಸುವ ಎಲ್.ಇ,ಡಿ ವಾಹನಗಳಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ಮಾತನಾಡಿದ ಕಾಫಿ ಮಂಡಳಿ ಅಧ್ಯಕ್ಷರಾದ ದಿನೇಶ್ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಪ್ರಧಾನ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ವಿವಿಧ ಇಲಾಖೆಯ ವತಿಯಿಂದ ಚಾಲನೆ ನೀಡಲಾಗಿದೆ. ಈ ಯಾತ್ರೆಯ ಉದ್ದೇಶ ಕಳೆದ 9 ವರ್ಷಗಳಲ್ಲಿ ಕೇಂದ್ರ ಸರ್ಕಾರವು ಜನರೀಗೆ ನೀಡಿರುವ ಯೋಜನೆಗಳ ಬಗ್ಗೆ ತಿಳಿಸುವುದಾಗಿದೆ. ಕರ್ನಾಟಕದ ಒಟ್ಟು 1107 ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದ ಅವರು ಕೇಂದ್ರದ ಯೋಜನೆಗಳಾದ ಮುದ್ರಾ ಯೋಜನೆ, ಆರೋಗ್ಯ ವಿಮೆ, ಉಜ್ವಲ್ ಯೋಜನೆ, ಜನ್ ಧನ್ ಹೀಗೆ ನೂರಾರು ಕಾರ್ಯಕ್ರಮಗಳನ್ನು ಮೋದಿ ಸರ್ಕಾರ ಜನರಿಗೆ ನೀಡಿದ್ದು ಯೋಜನೆಗಳ ಬಗ್ಗೆ ಜನರಿಗೆ ಮತ್ತಷ್ಟು ತಿಳಿಸುವುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಲಾಭ ಪಡೆದ ಆನೇಕ ಫಲಾನುಭಾವಿಗಳು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಇನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು 57 ದಿನಗಳ ಕಾಲ ವಿಕಸಿತ ಭಾರತ ಸಂಕಲ್ಪ ಯಾತ್ರೆ ನಡೆಯಲಿದ್ದು ಯೋಜನೆಗಳನ್ನು ಪ್ರಚಾರ ಪಡಿಸುವ ವಾಹನಗಳು ನಗರ ಹಾಗು ಗ್ರಾಮೀಣ ತೆರಳಿ ಕೇಂದ್ರದ ಜನಪರ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಯೋಜನೆಯಿಂದ ಹೊರಗುಳಿದವರನ್ನು ಯೋಜನೆಯ ವ್ಯಾಪ್ತಿಗೆ ತರುವಲ್ಲಿ ಕಾರ್ಯ ನಿರ್ವಹಿಸಲಿದೆ.
✍️….PIB Bengaluru