Reading Time: 2 minutes
ಸ್ಮಿಯಾಕ ಟ್ರಸ್ಟ್ (ರಿ), ಬಳ್ಳಾರಿ 68 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿರುವ ರಾಜ್ಯ ಮಟ್ಟದ “ಕರ್ನಾಟಕ ಸಾಧಕ ರತ್ನ”- ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗಿನ ಆರ್ ಕೆ ಬಾಲಚಂದ್ರ ಆಯ್ಕೆ.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಸ್ಮಿಯಾಕ ಚಾರಿಟಬಲ್ ಟ್ರಸ್ಟ್ ನಿಂದ ದಿನಾಂಕ 26/11/2023 ರ ಭಾನುವಾರ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ ರವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ , ಬಹು ಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ಮಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗೆ ನೀಡಿದ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ “ಕರ್ನಾಟಕ ಸಾಧಕ ರತ್ನ” ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.
ವರದಿ: ಅಶ್ವತ್ ಕುಮಾರ್, ಕುಶಾಲನಗರ