Reading Time: < 1 minute
ಮಾಯಮುಡಿ: ಮಾಯಮುಡಿ ಸರಕಾರಿ ಪ್ರೌಢಶಾಲೆಯಲ್ಲಿ ನಿರ್ಮಾಣಗೊಳ್ಳಲಿರುವ 5.20ಲಕ್ಷ ರೂ. ವೆಚ್ಚದ ಶೌಚಾಲಯ ಕಾಮಗಾರಿಗೆ ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಆಪಟ್ಟೀರ ಎಸ್.ಟಾಟು ಮೊಣ್ಣಪ್ಪ ಚಾಲನೆ ನೀಡಿದರು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಬಾಲಕ, ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣಗೊಳ್ಳುತ್ತಿದ್ದು, ಟಾಟು ಮೊಣ್ಣಪ್ಪ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಶುಚಿತ್ವಕ್ಕೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು.
ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರವಿ ಮೆಟ್ಟಲಕೋಡ್, ನರೇಗ ಅಭಿಯಂತರ ಗಣೇಶ್, ಗ್ರಾ.ಪಂ ಉಪಾಧ್ಯಕ್ಷೆ ಪಿ.ಎಸ್.ಶಾಂತ, ಸದಸ್ಯರುಗಳಾದ ಹೆಚ್.ಆರ್.ಸುಶೀಲ, ಜೆ.ಸುಮಿತ್ರ ಬಸವಣ್ಣ, ಸಿ.ಕೆ.ಪೂವಯ್ಯ, ಪಿ.ಮುತ್ತಮ್ಮ, ಶಾಲಾ ಮುಖ್ಯೋಪಾಧ್ಯಾಯರಾದ ವಾಣಿ ನಾಚಪ್ಪ, ಗುತ್ತಿಗೆದಾರರಾದ ಕಾಚುಮ ಖದೀಜ ಮತ್ತಿತರರು ಉಪಸ್ಥಿತರಿದ್ದರು.