ಕೊಡಗಿನ ಮಂದ್ ಮಾನಿಗಳನ್ನು ಉಳಿಸಿ ಬೆಳೆಸಲು ಸಂಸದೆ ತೇಜಸ್ವಿನಿ ಗೌಡ ಕರೆ

ಪೊನ್ನಂಪೇಟೆ: ಮಂದ್ ಮಾನಿಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸಲು ಹಾಗೂ ಹಬ್ಬಹರಿದಿನಗಳಲ್ಲಿ ಜನಾಂಗ ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಪುಗಳನ್ನು ತೊಡಲು ಎಂ.ಎಲ್.ಸಿ ತೇಜಸ್ವಿನಿ ಗೌಡ ಕರೆ ನೀಡಿದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಪೊನ್ನಂಪೇಟೆ ಸಮೀಪದ ಬೊಟ್ಟಿಯತ್ ನಾಡ್ ದೇವಮಕ್ಕಡ ಬಾಣೆ ಪುತ್ತರಿ ಕೋಲ್ ಮಂದ್ ಸಂದರ್ಭ ಮಂದ್’ಗಳ ಅಧ್ಯಯನಕ್ಕಾಗಿ ಭೇಟಿ ನೀಡಿ ಮಾತನಾಡಿದ ಸಂಸದೆ ತೇಜಸ್ವಿನಿ ಗೌಡ ಕೊಡವ ಜನಾಂಗ ಈ ದೇಶದಲ್ಲಿಯೇ ಒಂದು ವಿಶಿಷ್ಟ ಜನಾಂಗವಾಗಿದ್ದು, ನಶಿಸಿ ಹೋಗುತ್ತಿರುವ ಶ್ರೀಮಂತ ಸಂಸ್ಕೃತಿಯನ್ನು ಉಳಿಸುವ ಬೆಳೆಸುವಲ್ಲಿ ಯುವಜನಾಂಗ ಮುಂದಾಗಬೇಕಿದೆ ಎಂದು ಹೇಳಿದ ಅವರು ಕೊಡಗಿನ ಮಂದ್’ಗಳ ಬಗ್ಗೆ ಸಂಶೋಧನೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮಂದ್’ಗಳ ಬೆಳವಣಿಗೆಗೆ ಸರ್ಕಾರದ ಮಟ್ಟದಲ್ಲಿ ತನ್ನ ಕೈಲಾದ ಸಹಾಯ ಮಾಡುವುದಾಗಿ ತಿಳಿಸಿದರು. ನಮ್ಮ ಸಂಸ್ಕೃತಿ ಉಡುಗೃ ತೊಡುಗೆಗಳ ಬಗ್ಗೆ ನಮಗೆ ಕೀಳರಿಮೆ ಇರಬಾರದು ಮೊದಲು ನಾವು ಅದನ್ನು ಮುಂದಿನ ಪೀಳಿಗೆಗೆ ಸಂರಕ್ಷಿಸಬೇಕು. ಹಾಗಾದರೆ ಮಾತ್ರ ಒಂದು ಜನಾಂಗದ ಉಳಿವು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ಹುದೂರುವಿನ ತಕ್ಕ ಹಾಗೂ ಅಬೊಟ್ಟಿಯತ್ ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಸೇರಿದಂತೆ ಹಳ್ಳಿಗಟ್ಟು, ಈಚೂರ್, ಕುಂದಾ, ಮುಗಟಗೇರಿ, ಆರ್ವತೋಕ್ಲು ಗ್ರಾಮಗಳ ತಕ್ಕ ಮುಖ್ಯಸ್ಥರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು. ಸಾಮೂಹಿಕ ಮೂರು ಸುತ್ತು ಪುತ್ತರಿ ಕೋಲಾಟ್ ನಡೆಯಿತು.

Author Profile

ಸರ್ಚ್‌ ಕೂರ್ಗ್‌ ಮೀಡಿಯಾCoorg's Largest Network
"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ.
www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.

About ಸರ್ಚ್‌ ಕೂರ್ಗ್‌ ಮೀಡಿಯಾ

"ಸರ್ಚ್‌ ಕೂರ್ಗ್‌ ಮೀಡಿಯಾ" ವಿಶ್ಲೇಷಣಾತ್ಮಕ ಪತ್ರಿಕೋದ್ಯಮದಲ್ಲಿ‌ ಕೃಷಿ, ಸಹಕಾರ, ಪರಿಸರ, ವಿಜ್ಞಾನ ಮತ್ತು ಗ್ರಾಮೀಣ ಜೀವನವನ್ನು ಕೇಂದ್ರೀಕರಿಸುವ ಆನ್‌ಲೈನ್‌ ಮಾಧ್ಯಮವಾಗಿ ಅಸಂಖ್ಯ ಚಂದಾದಾರರೊಂದಿಗೆ, ಅತಿದೊಡ್ಡ ಹಾಗೂ ಅತಿ ವಿಸ್ತಾರವಾದ ಕೊಡಗಿನ ಜನಪ್ರಿಯ ಮಾಧ್ಯಮವಾಗಿದೆ. www.searchcoorg.com  ಹಾಗೂ Search Coorg App ಮುಖಾಂತರ ಕಾರ್ಯನಿರ್ವಹಿಸುತ್ತಿದೆ.
0 0 votes
Article Rating
Subscribe
Notify of
guest
0 Comments
Inline Feedbacks
View all comments