ಡಿ :3 ರಂದು ಚೆಯ್ಯಂಡಾಣೆಯಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ಚೆಯ್ಯಂಡಾಣೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ( ರಿ) ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ನರಿಯಂದಡ ಇದರ ಸಹಯೋಗದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಚೆಯ್ಯ0ಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಡಿ-3 ರಂದು ನಡೆಯಲಿದೆ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಡಾ-ಡಿ.ವೀರೇಂದ್ರ ಹೆಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ಹೆಗಡೆಯವರ ಶುಭಾಶೀರ್ವಾದಗಳೊಂದಿಗೆ ಕಾರ್ಯಕ್ರಮ ನಡೆಯಲಿದೆ.

ತಾ 3 ರ ಆದಿತ್ಯವಾರ ಬೆಳಗ್ಗೆ 7 ಗಂಟೆಗೆ ಗಣಪತಿ ಹೋಮ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ.

11.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನರಿಯಂದಡ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪೆಮ್ಮಂಡ ಕೌಶಿ ಕಾವೇರಮ್ಮ ವಹಿಸಲಿದ್ದಾರೆ.
ಉದ್ಘಾಟನೆ ಹಾಗೂ ಆಶೀರ್ವಚನವನ್ನು ಶ್ರೀ ಶ್ರೀ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಕಳಚೇರಿ ಮಠ ಅರಮೇರಿ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ನ ಯೋಜನಾಧಿಕಾರಿ ಪುರುಷೋತ್ತಮ, ನಿವೃತ್ತ ಶಿಕ್ಷಕರಾದ ರೇಖಾ ಉಲ್ಲಾಸ್, ಚೆಯ್ಯ0ಡಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರೇಮಕುಮಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಒಕ್ಕೂಟ ನರಿಯಂದಡ ಇದರ ಅಧ್ಯಕ್ಷೆ ಮುಂಡಿಯೊಳಂಡ ಮಾಚಮ್ಮ ಮತಿತ್ತರರು ಭಾಗವಹಿಸಲಿದ್ದಾರೆ ಎಂದು ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ನರಿಯಂದಡ ಇದರ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

0 0 votes
Article Rating
Subscribe
Notify of
guest
0 Comments
Inline Feedbacks
View all comments