ನಾಪೋಕ್ಲುವಿನ ಅಂಕುರ್ ಶಾಲೆಯ ವಿದ್ಯಾರ್ಥಿಗಳಿಂದ ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ

Reading Time: 2 minutes

ನಾಪೋಕ್ಲುವಿನ ಅಂಕುರ್ ಶಾಲೆಯ ವಿದ್ಯಾರ್ಥಿಗಳಿಂದ ಮಾದಕವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲು : ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಾಪೋಕ್ಲುವಿನ ಅಂಕುರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ನಾಪೋಕ್ಲು ಪಟ್ಟಣದಲ್ಲಿ ಬೀದಿ ನಾಟಕ ನಡೆಸಿದರು.

ನಾಪೋಕ್ಲುವಿನ ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ನ ಸದಸ್ಯ ವಿದ್ಯಾರ್ಥಿಗಳು ನಾಪೋಕ್ಲು ಪಟ್ಟಣದಲ್ಲಿ ಬೀದಿ ನಾಟಕ ನಡೆಸುವ ಮೂಲಕ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಜನಜಾಗೃತಿ ಮೂಡಿಸಿದರು.

ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಾತನಾಡಿ ಸಮಾಜದಲ್ಲಿ ವ್ಯಾಪಕವಾಗಿ ಹರಡಿರುವ ಮಾದಕ ವ್ಯಸನವೆಂಬ ದುಷ್ಟಶಕ್ತಿಯನ್ನು ನಿರ್ಮೂಲನೆ ಮಾಡಲು ಪೋಲಿಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವು ಮುಖ್ಯವಾಗಿದೆ. ದೇಶಾದ್ಯಂತ ಮಾದಕ ವಸ್ತುಗಳ ಬಳಕೆ ಶಾಲಾ ಕಾಲೇಜುಗಳಿಗೂ ವಿಸ್ತರಣೆಯಾಗುತ್ತಿರುವುದು ದೊಡ್ಡದುರಂತ.ಪೋಷಕರು ತಮ್ಮ ಮಕ್ಕಳಮೇಲೆ ಎಚ್ಚರ ವಹಿಸಬೇಕು.ಇದನ್ನು ತಳಮಟ್ಟದಿಂದಲೇ ನಿರ್ಮೂಲನೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ.ಇಲ್ಲಿ ಶಾಲೆಯ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ದುಷ್ಟರಿಣಾಮಗಳ ಕುರಿತು ಜಾಗೃತಿ ಮೂಡಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭ ಲಯನ್ಸ್ ಸಂಸ್ಥೆಯ ಕಾರ್ಯದರ್ಶಿ ಹಾಗೂ ಅಂಕುರ್ ಪಬ್ಲಿಕ್ ಶಾಲೆಯ ಮುಖ್ಯಸ್ಥರಾದ ಕೇಟೋಳಿರ ರತ್ನಾ ಚರ್ಮಣ, ಶಾಲೆಯ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.

ವರದಿ: ಝಕರಿಯ ನಾಪೋಕ್ಲು

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments