ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ಡಿ-18ರಂದು ಸೋಮವಾರ ಷಷ್ಠಿ ಪೂಜೆ
ಭಕ್ತಾದಿಗಳಿಗೆ ಸಾಮೂಹಿಕ ಆಶ್ಲೇಷ ಬಲಿ ಅವಕಾಶ.!!
ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಡಿ-18ನೇ ಸೋಮವಾರ ಬೆಳಿಗ್ಗೆ 10-00ಗಂಟೆಯಿಂದ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದ ಆವರಣದಲ್ಲಿರುವ ನಾಗ ಬನದಲ್ಲಿ ವಿಶೇಷ ಷಷ್ಠಿ ಪೂಜೆಯನ್ನು ಹಮ್ಮಿಕೊಳ್ಳಲಾಗಿದ್ದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ತಕ್ಕರಾದ ಚಮ್ಮಟೀರ ಸುಗುಣ ಮುತ್ತಣ್ಣ ಕೇಳಿಕೊಂಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಪ್ರತಿವರ್ಷದಂತೆ ಈ ವರ್ಷವೂ ಹಳ್ಳಿಗಟ್ಟು ಭದ್ರಕಾಳಿ ದೇವಸ್ಥಾನದ ಆವರಣದಲ್ಲಿರುವ ನಾಗಬನದಲ್ಲಿ ಸಾಮೂಹಿಕ ಷಷ್ಠಿ ಪೂಜೆಯನ್ನು ಹಮ್ಮಿಕೊಳ್ಳಲಾಗಿದ್ದು ಭಕ್ತರು ವಿವಿಧ ಸೇವೆಗಳನ್ನು ಮಾಡಿಸಬಹುದಾಗಿದೆ. ಈ ಸಂದರ್ಭ ನಡೆಯುವ ಸಾಮೂಹಿಕ ಆಶ್ಲೇಷ ಬಲಿ ಪೂಜೆಯಲ್ಲಿ ಭಕ್ತರು ಯಾರು ಬೇಕಾದರೂ ಪೂಜೆಯನ್ನು ಮಾಡಿಸಬಹುದಾಗಿದೆ. ಡಿಸೆಂಬರ್-18ರಂದು ಸೋಮವಾರ ಬೆಳಿಗ್ಗೆ 10-00 ಗಂಟೆಯಿಂದ ವಿವಿಧ ಪೂಜಾವಿಧಿ ವಿಧಾನಗಳು ನಡೆಯಲಿದ್ದು ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ದೇವಸ್ಥಾನದ ಅರ್ಚಕರು 9845308910 ಅಥವಾ ಗೌರವ ಕಾರ್ಯದರ್ಶಿ-9483815430 ಸಂಪರ್ಕಿಸಬಹುದಾಗಿದೆ ಎಂದು ಮಾಹಿತಿ ನೀಡಿದ್ದಾರೆ.