ಸುಬ್ರಹ್ಮಣ್ಯ ಷಷ್ಠಿ ಅಂಗವಾಗಿ ಸೋಮವಾರ ಹಳ್ಳಿಗಟ್ಟು ಶ್ರೀ ಭದ್ರಕಾಳಿ ದೇವಸ್ಥಾನದಲ್ಲಿ ವಿಶೇಷ ಷಷ್ಠಿ ಪೂಜೆಯನ್ನು ಹಮ್ಮಿಕೊಳ್ಳಲಾಯಿತು. ಇಲ್ಲಿನ ನಾಗ ಬನದಲ್ಲಿ ಪ್ರತಿಷ್ಟಾಪಿಸಲಾಗಿರುವ ನಾಗ ದೇವರಿಗೆ ವಿಶೇಷ ಪೂಜೆ ಹಾಗೂ ವಿವಿಧ ಅಭಿಷೇಕ ಮಾಡುವ ಮೂಲಕ ಭಕ್ತರು ತಮ್ಮ ಹರಕೆಯನ್ನು ಸಲ್ಲಿಸಿದ್ದರು. ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ಆಶ್ಲೇಷ ಬಲಿ ಪೂಜೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸಲಾಯಿತು. ನಂತರ ಭದ್ರಕಾಳಿ ದೇವಸ್ಥಾನದಲ್ಲಿ ಮಹಾಮಂಗಳಾರತಿಯ ಬಳಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಊರಿನವರು ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಸ್ಥರು ಹಾಗೂ ಭಕ್ತರು ಷಷ್ಠಿ ಪೂಜೆಯಲ್ಲಿ ಪಾಲ್ಗೊಂಡರು. ಊರು ತಕ್ಕರಾದ ಚಮ್ಮಟೀರ ಕುಟುಂಬಸ್ಥರ ತಕ್ಕಾಮೆಯಲ್ಲಿ ನಡೆದ ಷಷ್ಠಿ ಪೂಜೆಯಲ್ಲಿ ಮೂಕಳೇರ, ಮಚ್ಚಿಯಂಡ, ಚೇಂದಿಮಾಡ, ಕೂಕಂಡ, ಮನೆಯಪಂಡ, ಸಣ್ಣುವಂಡ, ಕೊಳೇರ ಸೇರಿದಂತೆ ಊರಿನ ವಿವಿಧ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹಾಗೂ ಭಕ್ತರು ಭಾಗವಹಿಸಿದ್ದರು. ಇಲ್ಲಿನ ಮುಖ್ಯ ಅರ್ಚಕರಾದ ಸುಬ್ರಮಣ್ಯ ಕೇಕುನ್ನಾಯ ನೇತೃತ್ವದಲ್ಲಿ ಪೂಜಾವಿಧಿ ವಿಧಾನಗಳು ನಡೆಯಿತು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.