Reading Time: < 1 minute
ಚೇರಂಬಾಣೆ: ಭಾಗಮಂಡಲ ಸಮೀಪದ ಚೇರಂಬಾಣೆಯ ಅರುಣ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ದಿನಾಂಕ 15.12.2023 ರಂದು ಎಲ್ಲಾ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು.
ನಮ್ಮ ವಾಟ್ಸಾಪ್ ಕಮ್ಯುನಿಟಿ ಲಿಂಕ್ https://chat.whatsapp.com/EicYYbrXCeEBY3KGWiZnRy ಜೋಯ್ನ್ ಆಗಿ.
ನಮ್ಮ ವಾಟ್ಸಾಪ್ ಚಾನಲ್ ಲಿಂಕ್ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.
ಕಾರ್ಯಕ್ರಮವನ್ನು ಬೇಂಗೂರು ಗ್ರಾಮ ಪಂಚಾಯತ್ ಸದಸ್ಯರಾದ ಕೆ.ಎಂ. ಬಶೀರ್ ರವರು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಬೇಕಲ್ ರಮಾನಾತ್ ಕರಿಕೆ ರವರು ಉಪಸ್ಥಿತರಿದ್ದು , ಜೀವನದಲ್ಲಿ ಕ್ರೀಡೆಯಿಂದ ದೊರೆಯುವ ಪ್ರಯೋಜನದ ಬಗ್ಗೆ ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪರಮೇಶ್ ಸ್ವಾಗತಿಸಿ, ರಮೇಶ್ ರವರು ವಂದಿಸಿದರು.ದೈಹಿಕ ಶಿಕ್ಷಕ ಅಯ್ಯಪ್ಪನವರು ವಿದ್ಯಾರ್ಥಿಗಳ ತಂಡವನ್ನು ವ್ಯವಸ್ಥಿತವಾಗಿ ಮುನ್ನಡೆಸಿದ್ದರು.