ಹೊದವಾಡ ರಾಫಲ್ಸ್ ಅಂತರಾಷ್ಟ್ರೀಯ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ

Reading Time: 4 minutes

ಹೊದವಾಡ ರಾಫಲ್ಸ್ ಅಂತರಾಷ್ಟ್ರೀಯ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಉತ್ತಮ ಶಿಕ್ಷಣದಿಂದ ವ್ಯಕ್ತಿತ್ವ ವಿಕಸನ ಸಾಧ್ಯ – ಸಾಹಿತಿ ನಾಗೇಶ್ ಕಾಲೂರು

ನಾಪೋಕ್ಲು: ಜೀವನದಲ್ಲಿ ವ್ಯಕ್ತಿತ್ವ ವಿಕಸನ ಹೊಂದಬೇಕಾದರೆ ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಸಾಹಿತಿ ನಾಗೇಶ್ ಕಾಲೂರು ಹೇಳಿದರು.

ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ರಾಫಲ್ಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಸಿ ಅವರು ಮಾತನಾಡಿದರು.

ಪ್ರತಿಯೊಬ್ಬರಿಗೂ ವಿದ್ಯಾರ್ಥಿ ಜೀವನವೆಂದರೆ ಬಹಳ ಮುಖ್ಯ, ಅಕ್ಷರ ಜ್ಞಾನದೊಂದಿಗೆ ಪ್ರಕೃತಿಯ ತತ್ವವನ್ನು ಅರಿತು ಅದರಲ್ಲಿ ಒಳ್ಳೆಯ ಗುಣಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಪೋಷಕರಿಗೆ ಗುರು ಹಿರಿಯರಿಗೆ ಗೌರವವನ್ನು ಕೊಡಬೇಕು.ಸಮಾಜದಲ್ಲಿ ಯಾವುದೇ ಜಾತಿ,ಜನಾಂಗ ಇರಬಹುದು,ಎಲ್ಲಾ ಧರ್ಮಗಳು ಕೂಡ ಒಳಿತನ್ನೇ ಬೋಧಿಸುತ್ತದೆ.ಯಾವ ಧರ್ಮವು ಕೂಡ ಇನ್ನೊಂದು ಧರ್ಮವನ್ನು ದ್ವೇಷಿಸಿ ಎಂದು ಹೇಳುವುದಿಲ್ಲ.ನಾವು ಭಾರತೀಯರು ಮಾನವೀಯತೆಗಿಂತ ಬೇರೆ ಧರ್ಮ ಇಲ್ಲ. ವಿದ್ಯಾರ್ಥಿಗಳು ಶಿಸ್ತು,ಸಂಸ್ಕೃತಿ ಪ್ರಾಮಾಣಿಕತೆಯನ್ನು ಬೆಳಸಿಕೊಂಡು ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಮಂಗಳೂರಿನ ಪ್ರೇರಕ ಭಾಷಣಗಾರ ರಫೀಕ್ ಮಾಸ್ಟರ್ ಪೋಷಕರು ಮಕ್ಕಳನ್ನು ದೇಶಕ್ಕೆ ಶಕ್ತಿಯಾಗಿ, ಮನೆಗೆ ಬೆಳಕಾಗಿ,ಶಾಲೆಗೆ ಕೀರ್ತಿ ತರುವಂತಹ ಮಕ್ಕಳನ್ನಾಗಿಗಿಸಲು ಪ್ರಯತ್ನ ಪಡಬೇಕು. ತಮ್ಮ ಮಕ್ಕಳನ್ನು ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು. ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಮೂಲಕ ಅವರು ಜೀವನದಲ್ಲಿ ತಲೆತಗ್ಗಿಸುವಂತೆ ಮಾಡಬಾರದು. ಮಕ್ಕಳ ಕೈಯಲ್ಲಿ ಪುಸ್ತಕವನ್ನು ಕೊಟ್ಟು ಅವರು ತಲೆತಗ್ಗಿಸಿ ಓದಿಸಿದರೆ ಜೀವನದಲ್ಲಿ ಅವರನ್ನು ತಲೆ ಎತ್ತಿ ನಡೆಯುವಂತೆ ಮಾಡುತ್ತದೆ ಎಂಬ ಅರ್ಥಗರ್ಭಿತವಾಗಿ ಮಾತನಾಡಿದ ಅವರು ಇದಕ್ಕೆ ಪೋಷಕರು ಶಿಕ್ಷಕರು ಹಾಗೂ ಸಮಾಜ ಅವರ ಮೇಲೆ ಗಮನಹರಿಸಬೇಕೆಂದು ಸಲಹೆ ನೀಡಿದರು.

ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲ, ಕೊಡಗು ಜಿಲ್ಲಾ ಮಾಜಿ ವಖ್ಫ್ ಬೋರ್ಡ್ ಅಧ್ಯಕ್ಷ ಅಬ್ದುಲ್ ರಹ್ಮಾನ್ ಪ್ರಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ಅತ್ಯುತ್ತಮ ಪಿಡಿಒ ಪ್ರಶಸ್ತಿ ಪಡೆದ ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಅವರನ್ನು ಹಾಗೂ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಹಾಗೂ ಶಾಲೆಯಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ನಂತರ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿ ನೆರೆದಿದ್ದ ಜನರ ಗಮನ ಸೆಳೆಯಿತು.
ಶಾಲೆಯ ಪ್ರಾಂಶುಪಾಲ ತನ್ವೀರ್ ಶಾಲಾ ವರದಿ ವಾಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕೊಡಗು ಜಿಲ್ಲಾ ಉಪಾಧ್ಯಕ್ಷರಾದ ಎನ್. ಕೆ. ಮೆಹಬೂಬ್ ಸಾಬ್ ವಹಿಸಿದ್ದರು.ಈ ಸಂದರ್ಭ ಶಾಲಾ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹಮ್ಮದ್ ಹುಸೈನ್ ಶಾಲೆಯ ಶಿಕ್ಷಕ ವೃಂದ, ಮಕ್ಕಳ ಪೋಷಕರು ಮತ್ತಿತರರು ಹಾಜರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಮುರ್ಶಿದಾ ಸಂಗಡಿಗರು ಪ್ರಾರ್ಥಿಸಿದರು.ವಿದ್ಯಾರ್ಥಿಗಳಾದ ಅಜ್ಮಲ್,ಶಬ್ನಾ ನಿರೂಪಿಸಿದರು. ಶಿಕ್ಷಕಿ ಸೌಜನ್ಯ ಸ್ವಾಗತಿಸಿ,ಶಿಕ್ಷಕಿ ಪೂಜಾ ವಂದಿಸಿದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments