ನಾಪೋಕ್ಲು ಚೆರಿಯಪರಂಬು ಸರ್ಕಾರಿ ಶಾಲಾ ಕೊಠಡಿ ಉದ್ಘಾಟನೆ ಮತ್ತು ವಾರ್ಷಿಕೋತ್ಸವ ಸಮಾರಂಭ

Reading Time: 5 minutes

ಮಕ್ಕಳು ಭವಿಷ್ಯ ರೂಪಿಸಿಕೊಳ್ಳಬೇಕಾದರೆ ನಮ್ಮೆಲ್ಲರ ಜವಾಬ್ದಾರಿ ಮುಖ್ಯ -ಶಾಸಕ ಪೊನ್ನಣ್ಣ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ನಾಪೋಕ್ಲು : ಮಕ್ಕಳು ಉತ್ತಮವಾದ ಶಿಕ್ಷಣವನ್ನು ಪಡೆದು ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ಪೋಷಕರು, ಶಿಕ್ಷಕರು ಹಾಗೂ ಜನಪ್ರತಿನಿಧಿಗಳಾದ ನಮ್ಮಂತವರ ಜವಾಬ್ದಾರಿ ಮುಖ್ಯ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಹೇಳಿದರು.

ನಾಪೋಕ್ಲು ಬಳಿಯ ಚೆರಿಯಪರಂಬುವಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿ ಹಾಗೂ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾಭ್ಯಾಸವನ್ನು ಪಡೆಯಲು ಮಕ್ಕಳಿಗೆ ನಾವು ಉತ್ತಮವಾದ ಅವಕಾಶವನ್ನು ಕಲ್ಪಿಸಿ ಕೊಡಬೇಕು. ಸರ್ಕಾರಿ ಶಾಲೆಯಲ್ಲಿ ಓದಿ ದೊಡ್ಡ ಹುದ್ದೆ ಅಲಂಕರಿಸಿದ ಹಲವಾರು ವ್ಯಕ್ತಿಗಳಿದ್ದಾರೆ. ಮಕ್ಕಳಿಗೆ ಅವರ ಪರಿಚಯ ಮಾಡಿ ಉತ್ತಮ ಸಮಾಜ ನಿರ್ಮಾಣ ಮಾಡಲು ನಾವೆಲ್ಲರೂ ಪಣತೊಡಬೇಕು. ಇಲ್ಲಿ ಉತ್ತಮವಾದ ಕೊಠಡಿ ನಿರ್ಮಾಣವಾಗಿದೆ. ಮುಂದೆ ಇದರ ಸದ್ಬಳಕೆ ಕೂಡ ಆಗಬೇಕು. ವಿದ್ಯಾರ್ಥಿಗಳಿಗೆ ಹೆಚ್ಚು ಓದಲಿಕ್ಕೆ ಸ್ಪೂರ್ತಿಯನ್ನು ಕೊಡಬೇಕು. ಯಾವುದೇ ರೀತಿಯ ಶಿಕ್ಷಣವನ್ನು ಪಡೆದರೆ ಉಪಯೋಗವಾಗುತ್ತದೆ ಎಂಬ ಬಗ್ಗೆ ಮಕ್ಕಳಿಗೆ ಪೂರಕವಾದ ಮಾಹಿತಿಯನ್ನು ನೀಡಬೇಕು. ಪೋಷಕರು ಮಕ್ಕಳಿಗೆ ಸ್ವತಂತ್ರವಾಗಿ ಜೀವಿಸಲು ಚಿಂತನೆಯನ್ನು ಕೊಟ್ಟು ಪ್ರೋತ್ಸಾಹಿಸಬೇಕೆಂದು ಶಾಸಕ ಪೊನ್ನಣ್ಣ ಸಲಹೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಮಾತನಾಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಲು ಸರ್ಕಾರ ಅಲವು ರೀತಿಯ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಾ ಬಂದಿದೆ. ಸರ್ಕಾರಿ ಶಾಲೆಯಲ್ಲಿರುವ ಶಿಕ್ಷಕರ ಕೊರತೆಯನ್ನು ನೀಗಿಸಿ ಶಿಕ್ಷಕರನ್ನು ನೇಮಕ ಮಾಡುವ ಭರವಸೆಯನ್ನು ಸರ್ಕಾರ ನೀಡಿದೆ. ಪೋಷಕರು ಸರ್ಕಾರಿ ಶಾಲೆಯ ಬಗ್ಗೆ ತಪ್ಪು ತಿಳಿಯುವ ಅವಶ್ಯಕತೆ ಇಲ್ಲ. ಸರ್ಕಾರಿ ಶಾಲೆಈಗ ಸುಧಾರಿಸುತ್ತಾ ಬಂದಿದೆ. ಪೋಷಕರು ಶಾಲೆಯಲ್ಲಿ ಏನೇ ಸಮಸ್ಯೆಗಳಿದ್ದರೂ ಅಧಿಕಾರಿಗಳ ಗಮನಕ್ಕೆ ತರಬೇಕು. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಲು ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ಶಾಲೆಯ ಬಗ್ಗೆ ಪೋಷಕರು,ಆಡಳಿತ ಮಂಡಳಿಯವರು ಹೆಚ್ಚಿನ ಗಮನ ಹರಿಸುತ್ತಾ ಬರುತ್ತಿರುವುದು ಶ್ಲಾಘನೀಯ. ನಿಮ್ಮೆಲ್ಲರ ಸಹಕಾರ ಇದೇ ರೀತಿ ಮುಂದುವರೆಯಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಮಾತನಾಡಿ ಸರ್ಕಾರದ ಅನುದಾನವನ್ನು ಕಾಯದೆ ಸ್ಥಳೀಯ ರಾಜಕೀಯ ಕ್ಷೇತ್ರದಲ್ಲಿರುವವರು, ಯುವಕರು, ವ್ಯವಹಾರ ಕ್ಷೇತ್ರದಲ್ಲಿ,ಸಂಘ ಸಂಸ್ಥೆಗಳಲ್ಲಿರುವ ಎಲ್ಲರೂ ಸೇರಿ ಸರ್ಕಾರಿ ಶಾಲೆಯ ಉಳಿವಿಗಾಗಿ ಹೋರಾಡಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ನಾನು ಸರ್ಕಾರಿ ಶಾಲೆಯಲ್ಲೇ ಕಲಿತು ಈ ಹುದ್ದೆ ಅಲಂಕರಿಸಿದ್ದೇನೆ. ಸರ್ಕಾರಿ ಶಾಲೆಗೆ ಬರುವ ಶಿಕ್ಷಕರು ಸರ್ಕಾರದ ನಿಗದಿಪಡಿಸಿದ ಶೈಕ್ಷಣಿಕ ಮಾನದಂಡವನ್ನು ಪೂರೈಸಿ ಆಯ್ಕೆಯಾಗಿರುತ್ತಾರೆ. ಆದರೆ ಖಾಸಗಿ ಶಾಲೆಯಲ್ಲಿ ಯಾವುದೇ ಮಾನದಂಡಗಳಿಲ್ಲದೆ ಪಿಯುಸಿ ಡಿಗಿರಿ ಕಲಿತು ನೇರವಾಗಿ ಶಿಕ್ಷಕರಾಗುತ್ತಾರೆ. ಪೋಷಕರು ದುಶ್ಚಟಗಳಿಂದ ಎಷ್ಟು ದೂರವಿರುತ್ತಾರೋ ಅದೇರೀತಿ ತಮ್ಮ ಮಕ್ಕಳು ಕೂಡ ದುಶ್ಚಟಗಳಿಂದ ದೂರವಿರುತ್ತಾರೆ ಎಂದ ಅವರು ಪೋಷಕರು ಮಕ್ಕಳ ಶೈಕ್ಷಣಿಕ ಬೆಳವಣಿಗೆ ಬಗ್ಗೆ ಗಮನಹರಿಸಬೇಂದರು.

ಕ್ಷೇತ್ರ ಸಮನ್ವಯಾಧಿಕಾರಿ ಕೆ.ಪಿ ಗುರುರಾಜ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಮಂಜುಳಾ ಚಿತ್ರಾಪುರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಶಾಸಕ ಪೊನ್ನಣ್ಣ,ಶಾಲೆಯ ಹಳೆಯ ವಿದ್ಯಾರ್ಥಿ ಸಿರಾಜ್,ಶಾಲೆಯ ಸ್ಥಳದಾನಿಗಳಾದ ಪಿ.ಎಂ. ಅರಫಾತ್, ಶೌರ್ಯ ತಂಡದ ದಿವ್ಯಮಂದಪ್ಪ , ಶಾಲೆಯ ಮುಖ್ಯ ಶಿಕ್ಷಕಿ ಲೀಲಾವತಿ, ಶಾಲೆಯ ಅಧ್ಯಕ್ಷ ಶಾದುಲಿ ಅವರನ್ನು ಶಿಕ್ಷಣ ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಶಾಲೆಯಲ್ಲಿ ಸಾಧನೆ ಮಾಡಿದ ಹಾಗೂ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಸಲಾದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನವನ್ನು ವಿತರಿಸಿದರು.
ಬಳಿಕ ವಿದ್ಯಾರ್ಥಿಗಳಿಂದ ನಡೆದ ವಿವಿಧ ಸಾಂಸ್ಕೃತಿಕ ವೈವಿಧ್ಯಮಯ ಕಾರ್ಯಕ್ರಮ ನೋಡುಗರ ಗಮನ ಸೆಳೆಯಿತು.

ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಶಾದುಲಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ,ಸದಸ್ಯರಾದ ಕೆ.ಎ. ಇಸ್ಮಾಯಿಲ್,ಕುಶು ಕುಶಾಲಪ್ಪ, ಸಾಬ ತಿಮ್ಮಯ್ಯ,ನಾಪೋಕ್ಲು ಕೆ ಪಿ ಎಸ್ ಶಾಲೆಯ ಪ್ರಭಾರ ಉಪಪಂಶುಪಾಲ ಎಂ. ಎಸ್. ಶಿವಣ್ಣ,ಚೆರಿಯಪರಂಬು ಜಮಾಅತ್ ಅಧ್ಯಕ್ಷ ಝುಬೈರ್,ಗುತ್ತಿಗೆದಾರ ಬಾಬು, ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು,ಶಾಲೆಯ ಎಲ್ಲಾ ಶಿಕ್ಷಕ ವೃಂದ,ಪೋಷಕರು, ವಿದ್ಯಾರ್ಥಿಗಳು, ಶಾಲೆಯ ಸಿಬ್ಬಂದಿಗಳು ಗ್ರಾಮಸ್ಥರು ಹಾಜರಿದ್ದರು.
ಶಿಕ್ಷಕಿ ನೇತ್ರಾವತಿ ಶಾಲಾ ವರದಿ ವಾಚಿಸಿದರು.ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಸ್ವಾಗತಿಸಿ, ಶಿಕ್ಷಕ ಸುಕುಮಾರ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments