ಕಕ್ಕಬ್ಬೆ ಗ್ರಾ.ಪಂ.ವ್ಯಾಪ್ತಿಯ ಕುಂಜಿಲ ಪೈನರಿ ಮಸೀದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಎ. ಎಸ್. ಪೊನ್ನಣ್ಣ

Reading Time: 2 minutes

ನಾಪೋಕ್ಲು: ನಾಪೋಕ್ಲು ಬಳಿಯ ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಪೈನರಿ ಮಸೀದಿ ರಸ್ತೆಗೆ ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾದ 1.8 ಕೋಟಿ ರೂ ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಚಾಲನೆ ನೀಡಿದರು.

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಬಳಿಕ ಮಾತನಾಡಿದ ಶಾಸಕ ಪೊನ್ನಣ್ಣ ಚುನಾವಣೆ ಸಂದರ್ಭದಲ್ಲಿ ಕುಂಜಿಲ ಗ್ರಾಮಕ್ಕೆ ಭೇಟಿ ನೀಡಿದಾಗ ಹಲವಾರು ವರ್ಷಗಳಿಂದ ಇಲ್ಲಿನ ಗ್ರಾಮಸ್ಥರು ರಸ್ತೆ ದುರಸ್ತಿಗೆ ಪ್ರಯತ್ನ ಪಟ್ಟರೂ ದುರಸ್ಥಿ ಕಾಣದ ಈ ರಸ್ತೆಯನ್ನು ಅಭಿವೃದ್ಧಿಪಡಿಸುವಂತೆ ಬೇಡಿಕೆಯನ್ನು ಇಟ್ಟಿದ್ದರು. ಅದರಂತೆ ಇಂದು ಗ್ರಾಮಸ್ಥರೊಂದಿಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ. ಕಾಮಗಾರಿಯಲ್ಲಿ ಯಾವುದೇ ಸಮಸ್ಯೆ ಕಂಡುಬಂದಲ್ಲಿ ಗ್ರಾಮಸ್ಥರು ಅಭಿಯಂತರ ಗಮನಕ್ಕೆ ತರಬೇಕು. ಗ್ರಾಮದಲ್ಲಿ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗಲು ಎಲ್ಲರೂ ಕೈಜೋಡಿಸಬೇಕೆಂದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಎ.ಇಸ್ಮಾಯಿಲ್,ಕುಂಜಿಲ ಜಮಾಅತ್ ಅಧ್ಯಕ್ಷ ಸೌಕತ್ ಅಲಿ, ಉಪಾಧ್ಯಕ್ಷ ಇಬ್ರಾಹಿಂ,ಪಂಚಾಯಿತಿ ಸದಸ್ಯರಾದ ಬಶೀರ್ ಪೊಯಕ್ಕರೆ, ಕುಂಡಂಡ ರಝಾಕ್,ಮಾಜಿ ಅಧ್ಯಕ್ಷ ಹಂಸ,ಕಲಿಯಂಡ ಸಂಪನ್ ಅಯ್ಯಪ್ಪ, ಮಾಜಿ ಪಂಚಾಯತ್ ಉಪಾಧ್ಯಕ್ಷ ಉಸ್ಮಾನ್,ಮಾಜಿ ಸದಸ್ಯ ಬಾಚಮಂಡ ಲವ ಚಿಣ್ಣಪ್ಪ, ರಾಜ್ಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಹಾಜಿ ಕುಂಜಿಲ, ಲೋಕೋಪಯೋಗಿ ಇಲಾಖೆಯ ಅಭಿಯಂತರ ಸತೀಶ್, ಗುತ್ತಿಗೆದಾರ ಬಾಬು ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಹಾಜರಿದ್ದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments