ಉರೂಸ್ ಅಂಗವಾಗಿ ವಿವಿಧ ಕಲಾ ತಂಡಗಳಿಂದ ದಫ್ ಸ್ವರ್ಧೆ
ಚೆಯ್ಯ0ಡಾಣೆ: ಸ್ಥಳೀಯ ಎಡಪಾಲ ಅಂಡತ್ ಮಾನಿ ಮಖಾಂ ಉರೂಸ್ ಇದೆ ಬರುವ ತಾ.28 ರಿಂದ 30 ವರೆಗೆ ಅತೀ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ ಎಂದು ಎಡಪಾಲ ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ ತಿಳಿಸಿದ್ದಾರೆ.
ಎಡಪಾಲ ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಕಚೇರಿಯಲ್ಲಿ ಕರೆಯಲಾದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಸುಮಾರು ಕೊಡಗು ಜಿಲ್ಲೆಯಲ್ಲಿ 300 ವರ್ಷಗಳ ಇತಿಹಾಸವಿರುವ ಹಲವಾರು ಪವಾಡಗಳಿಗೆ ಹೆಸರಾದ ಎಡಪಾಲ ಅಂಡತ್ ಮಾನಿ ದರ್ಗಾ ಷರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಪವಾಡ ಪುರುಷರ ಹೆಸರಿನಲ್ಲಿ ವರ್ಷ0ಪ್ರತಿ ನಡೆಸಿಕೊಂಡು ಬರುತ್ತಿರುವ ವಾರ್ಷಿಕ ಉರೂಸ್ (ನೇರ್ಚೆ) ಸಮಾರಂಭವನ್ನು ಈ ವರ್ಷವೂ ಅತಿ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ಸಾರ್ವಜನಿಕರು ಭಕ್ತಾದಿಗಳು ಜಾತಿ, ಮತ, ಭೇದವಿಲ್ಲದೆ ಅತ್ಯಧಿಕ ಸಂಖ್ಯೆಯಲ್ಲಿ ಆಗಮಿಸಿ ಈ ಪುಣ್ಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.
ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ಕೆ.ಎ.ಅಬೂಬಕ್ಕರ್ ಮುಸ್ಲಿಯಾರ್ ಮಾತನಾಡಿ ತಾ :28 ರ ಭಾನುವಾರ ಸಂಜೆ 4.30 ಗಂಟೆಗೆ ಪೊಯಾಪಳ್ಳಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು. ಶಾಫಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಝಿಯಾರತ್ ಗೆ ಅಲ್ ಹಾಜ್ ಕೆ. ನಿಝರ್ ಫೈಝಿ ಮುದರಿಸ್ ಎಡಪಾಲ ನೇತೃತ್ವ ವಹಿಸಲಿದ್ದಾರೆ.
ನಂತರ 5 ಗಂಟೆಗೆ ತಕ್ಕ ಮುಖ್ಯಸ್ಥರಾದ ಕೆ.ವೈ.ಕುಂಜ್ಞಹಮದ್ ನೇತೃತ್ವದಲ್ಲಿ ಮಖಾಂ ಅಲಂಕಾರ ನಡೆಯಲಿದೆ. ರಾತ್ರಿ ಪ್ರಖ್ಯಾತ ವಾಗ್ಮಿ ರಾಫಿ ಅಹ್ಸನಿ ಕಾಂದಪುರಂ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ತಾ :29 ರಂದು ಅಪರಾಹ್ನ 3.30 ಗಂಟೆಗೆ ಸನ್ಮಾನ,ದುಆ ಮಜ್ಲಿಸ್ ಹಾಗೂ ಸಾರ್ವಜನಿಕ ಸಮಾರಂಭ ನಡೆಯಲಿದ್ದು ಸಯ್ಯದ್ ರಶೀದ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ನೇತೃತ್ವ ವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಯು.ಶಾಫಿ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ನಾಇಬ್ ಖಾಝಿ ಅಬ್ದುಲ್ಲ ಫೈಝಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕರಾದ ಮಂಥರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕರ್ನಾಟಕ ರಾಜ್ಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹುಸೈನ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೋಡಿರ ವಿನೋದ್ ನಾಣಯ್ಯ ಹಾಗೂ ಸಾಮಾಜಿಕ, ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ. ರಾತ್ರಿ ಆಬಿದ್ ಹುದವಿ ತಚ್ಚಣ್ಣ ಧಾರ್ಮಿಕ ಮತ ಪ್ರವಚನ ನೀಡಲಿದ್ದಾರೆ.
ತಾ:30 ರಂದು ರಾತ್ರಿ ಪ್ರಖ್ಯಾತ ವಾಗ್ಮಿ ಇ.ಪಿ. ಅಬೂಬಕ್ಕರ್ ಅಲ್ ಖಾಸಿಮಿ ಪತ್ತನಾಪುರಂ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.
ಉರೂಸ್ ಅಂಗವಾಗಿ ದಫ್ ಸ್ವರ್ಧೆ:
ತಾ :29 ಸೋಮವಾರ ಹಾಗೂ 30ರ ಮಂಗಳವಾರ ವಿವಿಧ ಕಲಾ ತಂಡಗಳಿಂದ ದಫ್ ಸ್ವರ್ಧೆಕೂಡ ಆಯೋಜಿಸಲಾಗಿದ್ದು ಸ್ವರ್ಧೆಯಲ್ಲಿ ವಿಜೇತರಾದ ತಂಡಕ್ಕೆ ಬಹುಮಾನ ನೀಡಲಾಗುವುದೆಂದರು.
ತಾ :29 ರ ಸಂಜೆ 4.30 ಗಂಟೆಗೆ ಹಾಗೂ 30 ರ ರಾತ್ರಿ 10 ಗಂಟೆಗೆ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದರು.
ಸುದ್ದಿ ಗೋಷ್ಠಿಯಲ್ಲಿ ಪೊಯಾಪಳ್ಳಿ ಜಮಾಅತ್ ಕೋಶಾಧಿಕಾರಿ ಎರಟೆಂಡ ಹನೀಫ್, ಕುಂಜ್ಞಬ್ದುಲ್ಲಾ ಸಿ.ಎಂ. ಉಪಸ್ಥಿತರಿದ್ದರು.