ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Reading Time: 2 minutes

ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌ https://chat.whatsapp.com/EicYYbrXCeEBY3KGWiZnRy ಜೋಯ್ನ್‌ ಆಗಿ. ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌ https://whatsapp.com/channel/0029VaAKi709sBICmL0sGV2m ಫಾಲೋ ಮಾಡಿ.

ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಗಣರಾಜ್ಯೋತ್ಸವ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಕಚೇರಿಯ ಮುಂಭಾಗದಲ್ಲಿರುವ ಧ್ವಜಸ್ತಂಬದಲ್ಲಿ ಸಂಘದ ಅಧ್ಯಕ್ಷರಾದ ರಿಯಾಜ್ ಅಹಮದ್ ರವರು ಧ್ವಜಾರೋಹಣ ನಡೆಸಿದರು. ಕಾರ್ಯಕ್ರಮ ನಡೆದ ನಂತರ ನೆರೆದಿದ್ದ ಸಂಘದ ಸರ್ವ ಸದಸ್ಯರುಗಳಿಗೆ ಹಾಗೂ ನೆರೆದಿದ್ದ ಸಾರ್ವಜನಿಕರಿಗೆ ಸಿಹಿ ಹಂಚಲಾಯಿತು.

ಮೂರ್ನಾಡು ಫ್ರೆಂಡ್ಸ್ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವಾರ್ಷಿಕ ಮಹಾಸಭೆಯು ಇತ್ತೀಚಿಗೆ ಸಂಘದ ಕಚೇರಿಯಲ್ಲಿ ನಡೆಯಿತು. ಸಂಘದ ಕಾರ್ಯದರ್ಶಿ ಎನ್.ಕೆ. ಶಶಿಧರರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯನ್ನು ಸಂಘದ ಅಧ್ಯಕ್ಷರಾದ ಅಬೂಬಕ್ಕರ್.ಪಿ.ಕೆ. ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಸಂಘದ ಕಾರ್ಯದರ್ಶಿ ಎನ್.ಕೆ. ಶಶಿಧರರವರು ಸಭೆಗೆ ಆಗಮಿಸಿದ್ದ ಅಧ್ಯಕ್ಷರು ಆಡಳಿತ ಮಂಡಳಿ ಹಾಗೂ ಸರ್ವ ಸದಸ್ಯರುಗಳಿಗೆ ಸಭೆಗೆ ಸ್ವಾಗತವನ್ನು ಕೋರಿದರು, ನಂತರ ಸಭೆಯಲ್ಲಿ ಹಲವು ಕಾರ್ಯಕ್ರಮಗಳು ನಡೆದು ಸಂಘದ ಮುಂದಿನ ಸಾಲಿನ ಆಡಳಿತ ಮಂಡಳಿಯನ್ನು ನೂತನವಾಗಿ ಸರ್ವಾನುಮತದಿಂದ ಆರಿಸಲಾಯಿತು. ಸಂಘದ ನೂತನ ಅಧ್ಯಕ್ಷರಾಗಿ ರಿಯಾಜ್ ಅಹಮದ್, ಕಾರ್ಯದರ್ಶಿಯಾಗಿ ಶಶಿಧರ.ಎನ್.ಕೆ. ಹಾಗೂ ನೂತನ ಖಜಾಂಚಿಯಾಗಿ ಮನೋಜ್, ಗೌರವ ಅಧ್ಯಕ್ಷರಾಗಿ ಪಿ.ಕೆ. ಅಬೂಬಕ್ಕರ್, ನಿರ್ದೇಶಕರಾಗಿ ಇಲಿಯಾಸ್ ಹಾಗೂ ಶ್ರೀಧರ್ ಅವರನ್ನು ಆರಿಸಲಾಯಿತು. ನಂತರ ಸಂಘದ ಆಡಳಿತ ಮಂಡಳಿಯವರಿಗೆ ಸಂಘದ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು. ಸಂಘದ ಹಿರಿಯ ಸದಸ್ಯರಾದ ಕೇಶವರವರು ಸಂಘದ ಬಗ್ಗೆ ಹಿತವಚನ ನುಡಿದರು. ಸಂಘದ ನಿರ್ದೇಶಕರಾದ ರಶಿಕರವರು ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments